Home
ಸುದ್ದಿಜಾಲ

ಇಂದು ರಿಯಲ್‌ಮಿ C15 ಸ್ಮಾರ್ಟ್‌ಫೋನಿನ ಫಸ್ಟ್ ಸೇಲ್!

ರಿಯಲ್ ಮಿ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ 'ರಿಯಲ್‌ಮಿ C15' ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 27) ಮಧ್ಯಾಹ್ನ 12ರ ನಂತರ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ಅಧಿಕೃತ ರಿಯಲ್‌ ಮಿ ವೆಬ್‌ಸೈಟ್‌ ಮೂಲಕ ಮೊದಲ ಬಾರಿ ಸೇಲ್ ಆರಂಭಿಸಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 9,999 ರೂ. ಆಗಿದೆ.

ರಿಯಲ್‌ಮಿ C15

ಹೌದು, ರಿಯಲ್‌ಮಿ ಸಂಸ್ಥೆಯ ಹೊಸ ರಿಯಲ್‌ಮಿ C15 ಸ್ಮಾರ್ಟ್‌ಫೋನ್‌ ಇಂದು ಮಾರಾಟ ಪ್ರಾರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಇನ್ನುಳಿದ ಫೀಚರ್ಸ್‌ಗಳ ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ C15 ಸ್ಮಾರ್ಟ್‌ಫೋನ್ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.50 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಹೊಂದಿದೆ. ಇದರೊಂದಿಗೆ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಬಜೆಟ್ ದರದಲ್ಲಿ ಆಕರ್ಷಕ ಡಿಸ್‌ಪ್ಲೇ ಅನಿಸಲಿದೆ.

ಪ್ರೊಸೆಸರ್ ಬಲವೇನು

ಪ್ರೊಸೆಸರ್ ಬಲವೇನು

ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಮತ್ತು ರಿಯಲ್ ಮಿ UI ಬೆಂಬಲ ಪಡೆದಿದೆ. 3GB + 32GB ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒದಗಿಸಲಾಗಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್ ಪಡೆದಿದೆ. ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿವೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರಿಯಲ್‌ಮಿ C15 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯವನ್ನು ಹೊಂದಿದ್ದು, 18W ಸಾಮರ್ಥ್ಯದ ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ವೋಲ್ಟಿಇ, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್ ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಸೇರಿವೆ. ಹಿಂಭಾಗದಲ್ಲಿ ಜೋಡಿಸಲಾದ ಫಿಂಗರ್ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್‌ಗಳಲ್ಲಿ ಬಿಡುಗಡೆ ಆಗಿದೆ. 3GB + 32GB ವೇರಿಯಂಟ್ 9,999 ರೂ.ಗಳಾಗಿದೆ. ಹಾಗೂ 4GB RAM + 64GB ವೇರಿಯಂಟ್ 10,999ರೂ ಆಗಿದೆ.

Best Mobiles in India

English summary
Realme C15 is priced at Rs. 9,999 for the 3GB + 32GB storage model in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+