ಮಾರುಕಟ್ಟೆಗೆ ಎಂಟ್ರಿ ನೀಡಿದ ರಿಯಲ್‌ಮಿ C15 ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ವಲಯಕ್ಕೆ ಎಂಟ್ರಿ ಕೊಟ್ಟ ಕೆಲವೇ ವರ್ಷಗಳಲ್ಲಿ ಏರುಗತಿಯ ಜನಪ್ರಿಯತೆ ಪಡೆದುಕೊಂಡಿರುವ ಸ್ಮಾರ್ಟ್‌ಫೋನ್ ಕಂಪೆನಿ ಅಂದರೆ ಅದು ರಿಯಲ್‌ಮಿ ಕಂಪೆನಿ. ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಎನಿಸಿಕೊಂಡಿದೆ. ಪ್ರತಿ ಭಾರಿಯೂ ಹೊಸ ವಿನ್ಯಾಸ ಹಾಗೂ ವಿಶೇಷತೆಯ ಸ್ಮಾರ್ಟ್‌ಫೋನ್ ಪರಿಚಯಿಸುವ ರಿಯಲ್‌ಮಿ ಇದೀಗ ತನ್ನ ರಿಯಲ್‌ಮಿ C15 ಅನ್ನು ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ತನ್ನ C ಸರಣಿಯಲ್ಲಿ ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದೆ. ಅಲ್ಲದೆ ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ C15 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಮಿನಿ-ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 88.7 ಆಗಿದ್ದು, 420 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM + 64GB , 4GB RAM + 64GB , ಮತ್ತು 4GB RAM + 128GB ಆಂತರಿಕ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ ಅಲ್ಟ್ರಾ-ವೈಡ್-ಆಂಗಲ್ f/ 2.25 ಲೆನ್ಸ್ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬ್ಲ್ಯಾಕ್ ಆಂಡ್ ವೈಟ್ ಸೆನ್ಸಾರ್, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಮತ್ತು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ v5.0, 3.5mm ಹೆಡ್‌ಸೆಟ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ಮೆ C15 ಸ್ಮಾರ್ಟ್‌ಫೋನ್ 3GB RAM + 64GB ರೂಪಾಂತರದ ಬೆಲೆ IDR 1,999,000 (ಸುಮಾರು 10,300 ರೂ.), 4GB RAM + 64GB ರೂಪಾಂತರವು IDR 2,199,000 (ಸುಮಾರು ರೂ. 11,300), ಮತ್ತು 4GB RAM+ 128GB ರೂಪಾಂತರದ ಬೆಲೆ IDR 2,499,000 (ಸುಮಾರು 12,800 ರೂ.) ಬೆಲೆಯನ್ನು ಹೊಂದಿದೆ. ಇನ್ನು ರಿಯಲ್‌ಮಿ C15 ಸ್ಮಾರ್ಟ್‌ಫೋನ್ ಮೆರೈನ್ ಬ್ಲೂ ಮತ್ತು ಸೀಗಲ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications

