Home
ಸುದ್ದಿಜಾಲ

ಇಂದು ಅಗ್ಗದ ಬೆಲೆಯ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!

ರಿಯಲ್‌ಮಿ ಮೊಬೈಲ್‌ ಕಂಪೆನಿ ಇತ್ತೀಚಿಗಷ್ಟೇ ಬಿಡುಗಡೆ ಮಾಡಿರುವ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು(ಏ.13) ಮಧ್ಯಾಹ್ನ 12ರಿಂದ ರಿಯಲ್‌ಮಿ ಅಧಿಕೃತ ವೆಬ್‌ಸೈಟ್‌ ಮತ್ತು ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ಫಸ್ಟ್‌ ಸೇಲ್‌ ಆರಂಭವಾಗಿಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 6,999 ರೂ. ಆಗಿದೆ. ಆದರೆ ಮೊದಲ ಮಿಲಿಯನ್ ಗ್ರಾಹಕರಿಗೆ 200ರೂ ರಿಯಾಯಿತಿ ನೀಡಲಾಗಿದ್ದು, 6,799 ರೂ.ಗೆ ಖರೀದಿಸಬಹುದಾಗಿದೆ.

ರಿಯಲ್‌ಮಿ C20

ಹೌದು, ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್‌ ಹಿಂಬದಿಯಲ್ಲಿ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಹಿಲಿಯೊ G35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB + 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ 256GB ವರೆಗೂ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯಲ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅದು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, f/2.0 ಅಪಾರ್ಚರ್ ಜೊತೆಗೆ LED ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ f/2.2 ಅಪಾರ್ಚರ್‌ ನೊಂದಿಗೆ 5 ಮೆಗಾ ಪಿಕ್ಸೆಲ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು ಉತ್ತಮ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 2GB RAM + 32GB ಸ್ಟೋರೇಜ್ ವೇರಿಯಂಟ್ ಬೆಲೆಯು 6,999ರೂ. ಆಗಿದೆ. ಆದರೆ ಆರಂಭಿಕ ಕೊಡುಗೆಯಾಗಿ ಮೊದಲ ಒಂದು ಬಿಲಿಯನ್ ಗ್ರಾಹಕರಿಗೆ 6,799ರೂ. ದರದಲ್ಲಿ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್ ಗ್ರಾಹಕರಿಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವುದರಿಂದ ಹೆಚ್ಚುವರಿ 5 ಪ್ರತಿಶತದಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಇನ್ನು ಈ ಫೋನ್‌ ಕೂಲ್ ಬ್ಲೂ ಮತ್ತು ಕೂಲ್ ಗ್ರೇ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ರಿಯಲ್‌ಮಿ ಸಿ 20 ರಿಯಲ್ಮೆ ಡಾಟ್ ಕಾಮ್ ಮತ್ತು ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಮಾರಾಟ ಇಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ನೇರ ಪ್ರಸಾರವಾಗಲಿದೆ.

Best Mobiles in India

English summary
Realme C20 is all set to go on its first sale in India today.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+