ಅಗ್ಗದ ದರದಲ್ಲಿ ರಿಯಲ್‌ಮಿ C20 ಸ್ಮಾರ್ಟ್‌ಫೋನ್ ಅನಾವರಣ: ಫೀಚರ್ಸ್‌ ಏನು?

|

ಜನಪ್ರಿಯ ಮೊಬೈಲ್‌ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ರಿಯಲ್‌ಮಿ ಕಂಪನಿಯು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿದೆ. ಇದೀಗ ಕಂಪನಿಯು ಹೊಸದಾಗಿ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವಲ್ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿದ್ದು, 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಆಕರ್ಷಣೀಯ ಅನಿಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಈಗ ನೂತನವಾಗಿ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಅನ್ನು ವಿಯೆಟ್ನಾಂನಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 2GB RAM + 32GB ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಮೀಡಿಯಾಟೆಕ್ ಹಿಲಿಯೊ G35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನುಳಿದಂತೆ ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35SOC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB, 4GB RAM ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಸಿಂಗಲ್ ಕ್ಯಾಮೆರಾ

ಸಿಂಗಲ್ ಕ್ಯಾಮೆರಾ

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಅದು 8ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್‌ ನೀಡಲಾಗಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್‌ ಹಾಗೂ ಫೋಟೊ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ C20 ಸ್ಮಾರ್ಟ್‌ಫೋನ್‌ 2GB RAM + 32GB ಬೇಸ್‌ ವೇರಿಯಂಟ್‌ ಬೆಲೆಯು ವಿಯೆಟ್ನಾಂನಲ್ಲಿ VND 2,490,000 (ಭಾರತದಲ್ಲಿ ಅಂದಾಜು 7,800ರೂ).ಆಗಿದೆ. ಈ ಫೋನ್ ಬ್ಲೂ ಹಾಗೂ ಗ್ರೇ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಭಾರತದಲ್ಲಿ ಯಾವಾಗ ಲಾಂಚ್ ಎನ್ನುವ ಮಾಹಿತಿ ಹೊರಹಾಕಿಲ್ಲ.

Best Mobiles in India

English summary
Realme C20 comes with a single 8-megapixel rear camera and a 5-megapixel selfie camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X