ರಿಯಲ್‌ಮಿ C20A ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ರಿಯಲ್‌ಮಿ ಕಂಪೆನಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ C20A ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C20A ಸ್ಮಾರ್ಟ್‌ಫೋನ್ ಅನ್ನು ಬಾಂಗ್ಲಾದೇಶದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಎರಡು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ C20A ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 10 ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ 802.11, ಬ್ಲೂಟೂತ್ ವಿ 5, ಜಿಪಿಎಸ್, ಮೈಕ್ರೋ-ಯುಎಸ್‌ಬಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C20A ಸ್ಮಾರ್ಟ್‌ಫೋನ್ ಬೆಲೆ ಬಿಡಿಟಿ 8,990 (ಅಂದಾಜು 7,800 ರೂ.)ಗೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಐರನ್ ಗ್ರೇ ಮತ್ತು ಲೇಕ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ ಮತ್ತು ಬಾಂಗ್ಲಾದೇಶದಲ್ಲಿ ಖರೀದಿಸಲು ಲಭ್ಯವಿರುತ್ತದೆ. ಇದನ್ನು ಇತರ ದೇಶಗಳಲ್ಲೂ ಬಿಡುಗಡೆ ಮಾಡಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.


Click it and Unblock the Notifications





