Home
ಸುದ್ದಿಜಾಲ

ರಿಯಲ್‌ಮಿ C21 ಸ್ಮಾರ್ಟ್‌ಫೋನ್ ಲಾಂಚ್; ಟ್ರಿಪಲ್ ಕ್ಯಾಮೆರಾ ಸ್ಪೆಷಲ್!

ರಿಯಲ್‌ಮಿ ಮೊಬೈಲ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್‌ ಮಾಡೆಲ್‌ ಆಗಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಮೀಡಿಯಾ ಟೆಕ್ ಹಿಲಿಯೋ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿರುವ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯು ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ ಅನ್ನು ಮಲೇಷ್ಯಾದಲ್ಲಿ ಬಿಡುಗಡೆ ಮಾಡಿದೆ. ಈ ಫೋನಿನ ಡಿಸ್‌ಪ್ಲೇಯು ಗ್ರೇಡಿಯಂಟ್ ಫಿನಿಶ್‌ನೊಂದಿಗೆ ವಾಟರ್‌ಡ್ರಾಪ್‌ ಸ್ಟೈಲ್‌ ನಾಚ್ ಲುಕ್ ಪಡೆದಿದೆ. ಈ ಫೋನ್ 3GB RAM ವೇರಿಯಂಟ್‌ ಆಯ್ಕೆಯನ್ನು ಹೊಂದಿದ್ದು, ಕ್ರಾಸ್‌ ಬ್ಲ್ಯಾಕ್‌ ಮತ್ತು ಕ್ರಾಸ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಹೇಗಿದೆ

ಡಿಸ್‌ಪ್ಲೇ ಡಿಸೈನ್ ಹೇಗಿದೆ

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.5-ಇಂಚಿನ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯಿಂದ ಬಾಹ್ಯಬಾಡಿಯ ನಡುವಿನ ಅನುಪಾತವು ಶೇ. 89.5 ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ ವಿಶೇಷ

ತ್ರಿವಳಿ ಕ್ಯಾಮೆರಾ ವಿಶೇಷ

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ವೇರಿಯಂಟ್ ಬೆಲೆಯು ಮಲೇಷ್ಯಾದಲ್ಲಿ MYR 499 ಆಗಿದೆ (ಭಾರತದಲ್ಲಿ ಅಂದಾಜು 8,900ರೂ. ಎನ್ನಲಾಗಿದೆ). ಹಾಗೆಯೇ ಈ ಫೋನ್ ಕ್ರಾಸ್‌ ಬ್ಲ್ಯಾಕ್‌ ಮತ್ತು ಕ್ರಾಸ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ

Best Mobiles in India

English summary
Realme C21 phone is powered by the MediaTek Helio G35 SoC and packs a large 5,000mAh battery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+