ಇಂದು ರಿಯಲ್‌ಮಿ C21 ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌: ಅಗ್ಗದ ಬೆಲೆಯಲ್ಲಿ ಲಭ್ಯ!

|

ರಿಯಲ್‌ ಮಿ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ C21 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 14) ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 7,999ರೂ. ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ C21 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ C21 ಡಿಸ್‌ಪ್ಲೇ

ರಿಯಲ್‌ಮಿ C21 ಡಿಸ್‌ಪ್ಲೇ

ರಿಯಲ್‌ಮಿ C21 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.

ರಿಯಲ್‌ಮಿ C21 ಪ್ರೊಸೆಸರ್‌

ರಿಯಲ್‌ಮಿ C21 ಪ್ರೊಸೆಸರ್‌

ರಿಯಲ್‌ಮಿ C21 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM + 32GB ಮತ್ತು 4GB RAM + 64GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ರಿಯಲ್‌ಮಿ C21 ಕ್ಯಾಮೆರಾ

ರಿಯಲ್‌ಮಿ C21 ಕ್ಯಾಮೆರಾ

ರಿಯಲ್‌ಮಿ C21 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯಲ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಮೂರನೇ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ 5 ಮೆಗಾ ಪಿಕ್ಸಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ರಿಯಲ್‌ಮಿ C21 ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C21 ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C21 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು ಉತ್ತಮ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ C21 ಸ್ಮಾರ್ಟ್‌ಫೋನ್‌ 3GB RAM + 32GB ವೇರಿಯಂಟ್ ಬೆಲೆಯು 7,999ರೂ. ಆಗಿದೆ. 4GB RAM + 64GB ವೇರಿಯಂಟ್ ಬೆಲೆಯು 8,999ರೂ. ಆಗಿದೆ. ಇನ್ನು ಈ ಫೋನ್‌ ಕ್ರಾಸ್‌ ಬ್ಲೂ ಮತ್ತು ಕ್ರಾಸ್‌ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಈ ಫೋನ್ ಇಂದು ಫ್ಲಿಪ್‌ಕಾರ್ಟ್ ತಾಣ ಮತ್ತು ಅಧಿಕೃತ ರಿಯಲ್‌ಮಿ ತಾಣಗಳಲ್ಲಿ ಸೇಲ್ ಆರಂಭಿಸಲಿದೆ.

Most Read Articles
Best Mobiles in India

English summary
Realme C21 price in India starts at Rs. 7,999 for the 3GB RAM + 32GB storage variant.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X