ಭಾರತದಲ್ಲಿ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಏರುಗತಿಯಲ್ಲಿ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ದಿನಾಂಕವನ್ನು ರಿಯಲ್‌ಮಿ ಕಂಪೆನಿ ದೃಡಪಡಿಸಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನಾವರಣವು Realme.com ನಲ್ಲಿ ನಡೆಯಲಿದೆ. ಇದು 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 81.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೋಕ್ T610 SoC ಪ್ರೊಸೆಸರ್ ಅನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹಣೆಯನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ನಿರೀಕ್ಷೆ ಇದೆ. ಇದು ರಿವರ್ಸ್ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ v5, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 23 ರಂದು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದು ಕ್ರಾಸ್ ಬ್ಲೂ ಮತ್ತು ಕ್ರಾಸ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ ಎಂದು ಖಚಿತವಾಗಿದೆ.


Click it and Unblock the Notifications








