ಭಾರತದಲ್ಲಿ ಬಜೆಟ್ ಬೆಲೆಯ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಲಾಂಚ್!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೆ ಇದು ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು ಸೂಪರ್ ಪವರ್ ಸೇವಿಂಗ್ ಮೋಡ್‌ನಿಂದ ಬೆಂಬಲಿತವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 81.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್
ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಹೊಸ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, ರಿವರ್ಸ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ v5.0, GPS/A-GPS, ಮೈಕ್ರೋ- USB, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಕೇವಲ ಐದು ಶೇಕಡಾ ಬ್ಯಾಟರಿಯೊಂದಿಗೆ 2.33 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸುತ್ತದೆ. ವಿಭಿನ್ನ ಕ್ಯಾಮರಾ ಫಲಿತಾಂಶಗಳನ್ನು ನೀಡಲು ಸೂಪರ್ ನೈಟ್ ಸ್ಕೇಪ್ ಮತ್ತು ಕ್ರೋಮಾ ಬೂಸ್ಟ್ ಸೇರಿದಂತೆ ಪೂರ್ವ ಲೋಡ್ ಮಾಡಲಾದ ವೈಶಿಷ್ಟ್ಯಗಳಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ C21Y ಸ್ಮಾರ್ಟ್‌ಫೋನ್ ಬೆಲೆ 3GB + 32GB ಸ್ಟೋರೇಜ್ ರೂಪಾಂತರಕ್ಕೆ 8,999ರೂ, ಮತ್ತು 4GB + 64GB ಸ್ಟೋರೇಜ್ ಆಯ್ಕೆಗೆ 9,999.ರೂ ಬೆಲೆ ಹೊಂದಿದೆ. ಈ ಫೋನ್ ಕ್ರಾಸ್ ಬ್ಲಾಕ್ ಮತ್ತು ಕ್ರಾಸ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್, Realme.com ಸೈಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ.


Click it and Unblock the Notifications








