Home
ಸುದ್ದಿಜಾಲ

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ ಲಾಂಚ್‌! ಫೀಚರ್ಸ್‌ ಹೇಗಿದೆ?

ಜನಪ್ರಿಯ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದು, ಬದಿಯಲ್ಲಿ ಸ್ಲಿಮ್ ಬೆಜೆಲ್‌ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ರಿಯರ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ ಅನ್ನು ವಿಯೆಟ್ನಾಂನಲ್ಲಿ ಲಾಂಚ್‌ ಮಾಡಿದೆ. ಇದು 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸಾಕ್ ಟಿ 610SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬ್ಲಾಕ್‌ ಆಂಡ್‌ ವೈಟ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ರಿವರ್ಸ್‌ ವೈಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಚಾರ್ಜಿಂಗ್‌ ಫೋರ್ಟ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C21Y ಸ್ಮಾರ್ಟ್‌ಫೋನ್‌ 3GB RAM + 32GB ಶೇಖರಣಾ ಮಾದರಿಗೆ ವಿಡಿಎನ್ 3,240,000 (ಸರಿಸುಮಾರು 10,500 ರೂ.) ಮತ್ತು 4GB RAM + 64GB ಮಾದರಿಗೆ ವಿಡಿಎನ್ 3,710,000 (ಸರಿಸುಮಾರು ರೂ. 12,000) ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್‌ ಕಾರೊ ಮತ್ತು ಕ್ಯಾರಮೆಲ್ ಗ್ರೀನ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಇದು ಪ್ರಮುಖ ಆನ್‌ಲೈನ್ ಚಿಲ್ಲರೆ ವ್ಯಾಪಾರಿಗಳ ಮೂಲಕ ವಿಯೆಟ್ನಾಂನಲ್ಲಿ ಖರೀದಿಸಲು ಲಭ್ಯವಿದೆ. ಸದ್ಯ ಭಾರತದಲ್ಲಿ ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

Best Mobiles in India

English summary
Realme C21Y comes with a 5,000mAh battery that supports reverse charging which means you can charge other devices using a cable.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+