ಇಂದು ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಸೇಲ್: ಫೀಚರ್ಸ್ ಏನು?
ರಿಯಲ್ ಮಿ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 16) ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 9,999ರೂ.ಆಗಿದೆ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ C25 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ C25 ಡಿಸ್‌ಪ್ಲೇ
ರಿಯಲ್‌ಮಿ C25 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.

ರಿಯಲ್‌ಮಿ C25 ಪ್ರೊಸೆಸರ್
ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G70 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 4GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ರಿಯಲ್‌ಮಿ C25 ಕ್ಯಾಮೆರಾ
ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಮೂರನೇ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 5 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ರಿಯಲ್‌ಮಿ C25 ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C25 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಅಪ್ ಅನ್ನು ಹೊಂದಿದ್ದು, ಇದು 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಎಫ್ಐ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್ಬಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಮಂಡಳಿಯಲ್ಲಿನ ಸಂವೇದಕಗಳಲ್ಲಿ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ. ಫೋನ್ ಹಿಂಭಾಗದಲ್ಲಿ ಫಿಂಗರ್ಪ್ರಿಂಟ್ ಸೆನ್ಸಾರ್ನೊಂದಿಗೆ ಬರುತ್ತದೆ.

ಬೆಲೆ ಎಷ್ಟು ಮತ್ತು ಲಭ್ಯತೆ?
ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ C25 ಸ್ಮಾರ್ಟ್‌ಫೋನ್ 4GB RAM + 64GB ವೇರಿಯಂಟ್ ದರವು 9,999ರೂ. ಆಗಿದ್ದು, 4GB RAM + 128GB ವೇರಿಯಂಟ್ ಬೆಲೆಯು 10,999ರೂ. ಆಗಿದೆ. ಈ ಫೋನ್ ಇಂದು ಫ್ಲಿಪ್‌ಕಾರ್ಟ್ ತಾಣ ಮತ್ತು ಅಧಿಕೃತ ರಿಯಲ್ ಮಿ ತಾಣಗಳಲ್ಲಿ ಸೇಲ್ ಆರಂಭಿಸಲಿದೆ.


Click it and Unblock the Notifications




