ಇಂದು ಅಗ್ಗದ ರಿಯಲ್‌ಮಿ C25s ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!

|

ರಿಯಲ್‌ ಮಿ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ C25s ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಜೂನ್. 9) ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 9,999ರೂ. ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ C25s ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ C25s ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ C25s ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ LCD ಪೂರ್ಣ ಹೆಚ್‌ಡಿ ಪ್ಲಸ್‌ ಹೊಂದಿದೆ. ಈ ಡಿಸ್‌ಪ್ಲೇಯ ಟೀಯರ್‌ಟ್ರಾಪ್ ಸ್ಟೈಲ್ ನಾಚ್ ಮಾದರಿಯಲ್ಲಿದ್ದು, ಡಿಸ್‌ಪ್ಲೇ ಅನುಪಾತವು 88.7 ಆಗಿದೆ. 570 nits ಬ್ರೈಟ್ನೆಸ್‌ ನಿಟ್ಸ್‌ ಸಾಮರ್ಥ್ಯವನ್ನು ಹೊಂದಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ರಿಯಲ್‌ಮಿ C25s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಇದೆ. ಇದರೊಂದಿಗೆ 64GB ಸ್ಟೋರೇಜ್ ಹಾಗೂ 128GB ವೇರಿಯಂಟ್ ಆಯ್ಕೆ ಹೊಂದಿದ್ದು, 4GB RAM ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ವಿಸ್ತರಣೆಗೆ ಅವಕಾಶ ಇದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ರಿಯಲ್‌ಮಿ C25s ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿರಲಿದೆ. ಇನ್ನು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಪಡೆದಿರಲಿದೆ. ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್ ರಿಯಲ್‌ಮಿ C25s ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯವನ್ನು ಹೊಂದಿದ್ದು, 18W ಸಾಮರ್ಥ್ಯದ ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ. ಇದರರೊಂದಿಗೆ ಕನೆಕ್ಟಿವಿಟಿಗಾಗಿ ಫೋನ್ 4 ಜಿ ವೋಲ್ಟಿಇ, ಜಿಪಿಎಸ್, ವೈ-ಫೈ, ಬ್ಲೂಟೂತ್ ಅನ್ನು ಬೆಂಬಲಿಸುತ್ತದೆ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಹೊಂದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ C25s ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 9,999ರೂ.ಗಳಾಗಿದೆ. ಹಾಗೂ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆಯು 10,999ರೂ.ಗಳಾಗಿದೆ. ಈ ಫೋನ್ ಇಂದು (ಜೂನ್ 9) ರಂದು ಫಸ್ಟ್‌ ಫ್ಲಿಪ್‌ಕಾರ್ಟ್‌ ಮೂಲಕ ಸೇಲ್ ಶುರುವಾಗಲಿದೆ. ಗ್ರೇ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

Most Read Articles
Best Mobiles in India

English summary
Realme C25s Today First Sale In India Via Flipkart Realme.com: Price Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X