ರಿಯಲ್‌ಮಿ C25Y ಸ್ಮಾರ್ಟ್‌ಫೋನ್ ಬಿಡುಗಡೆ! 48 ದಿನಗಳ ಸ್ಟ್ಯಾಂಡ್‌ಬೈ ಟೈಂ ವಿಶೇಷ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಬಜೆಟ್ ಬೆಲೆಯ ಜತೆಗೆ ಹೈ ಎಂಡ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಭಾರತದಲ್ಲಿ ರಿಯಲ್‌ಮಿ C25Y ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಫೋನ್ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C25Y ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯುನಿಸೋಕ್ SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 48 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಬಿಕ ಬೆಲೆ 10,999ರೂ. ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ C25Y ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 420 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ C25Y ಫೋನ್ ಆಕ್ಟಾ-ಕೋರ್ ಯುನಿಸೋಕ್ T610 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಆರ್ ಎಡಿಷನ್ ಇಂಟರ್ಫೇಸ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM + 64GB ಮತ್ತು 4GB RAM+ 128 GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ C25Y ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI ಬ್ಯೂಟಿ, HDR ಮೋಡ್, ಪನೋರಮಿಕ್ ವ್ಯೂ, ಪೋರ್ಟ್ರೇಟ್, ಫೀಚರ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C25Y ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ 48 ದಿನಗಳ ಸ್ಟ್ಯಾಂಡ್‌ಬೈ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಬ್ಲೂಟೂತ್ v5, GPS/A-GPS, ಮೈಕ್ರೋ- USB, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ C25Y ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ರೂಪಾಂತರಕ್ಕೆ 10,999.ರೂ ಹಾಗೂ 4GB RAM+ 128 GB ಸ್ಟೋರೇಜ್ ರೂಪಾಂತರಕ್ಕೆ 11,999.ರೂ ಬೆಲೆಯನ್ನು ಹೊಂದಿವೆ. ಇನ್ನು ಈ ಎರಡೂ ಮಾದರಿಗಳು ಗ್ಲೇಸಿಯರ್ ಬ್ಲೂ ಮತ್ತು ಮೆಟಲ್ ಗ್ರೇ ಕಲರ್ ಆಯ್ಕೆಗಳಲ್ಲಿ ಬರುತ್ತವೆ. ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 20 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಆರಂಭವಾಗುವ ಪ್ರಿ-ಆರ್ಡರ್‌ಗಳಿಗಾಗಿ ಲಭ್ಯವಿವೆ. ಇದು ಸೆಪ್ಟೆಂಬರ್ 27ರಂದು ಸೇಲ್ ಆಗಲಿದೆ.


Click it and Unblock the Notifications








