Just In
Don't Miss
- News
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ; ಪರ-ವಿರೋಧ
- Movies
ತೆಲುಗಿನ ಬ್ಲಾಕ್ ಬಸ್ಟರ್ 'ಕ್ರ್ಯಾಕ್' ಸಿನಿಮಾ ಹಿಂದಿಗೆ ರೀಮೇಕ್?
- Education
RBI Recruitment 2021: 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಹಳೆಯ 100 ರೂಪಾಯಿ ನೋಟುಗಳನ್ನು ಆರ್ಬಿಐ ಹಿಂಪಡೆಯುವ ಸಾಧ್ಯತೆ!
- Automobiles
ವಿವಿಧ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಟಾಟಾ ಮೋಟಾರ್ಸ್
- Lifestyle
ನಿಮ್ಮ ಡಲ್ ಸ್ಕಿನ್ ಹೋಗಲಾಡಿಸಲು ಸುಲಭವಾದ ಮನೆಮದ್ದು ಇಲ್ಲಿದೆ
- Sports
ಐಪಿಎಲ್ 2021: ಮತ್ತೆ ಕಣಕ್ಕಿಳಿಯಲು ವೇಗಿ ಎಸ್ ಶ್ರೀಶಾಂತ್ ಸಜ್ಜು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಿಯಲ್‌ಮಿಯಿಂದ ರಿಯಲ್‌ಮಿ C2s ಸ್ಮಾರ್ಟ್‌ಫೋನ್ ಲಾಂಚ್!
ಚೀನಾ ಮೂಲದ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ಇದೀಗ ತನ್ನ ಹೊಸ ರಿಯಲ್‌ಮಿ C2s ಸ್ಮಾರ್ಟ್‌ಫೋನ್ ಅನ್ನ ಥೈಲ್ಯಾಂಡ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ ಪಿ22 SoC ಪ್ರೊಸೆಸರ್ ಹೊಂದಿದ್ದು, ವಾಟರ್ ಡ್ರಾಪ್ ನಾಚ್ ಹೊಂದಿರುವ 6.1-ಇಂಚಿನ ಐಪಿಎಸ್ ಎಲ್ಸಿಡಿ ಡಿಸ್‌ಪ್ಲೇ ಹೊಂದಿರುವುದು ಇದರ ವಿಶೇಷತೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸ್ಟ್ಯಾಂಡರ್ಡ್ ರಿಯಲ್ಮೆ ಸಿ 2 ನಂತೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್ ರಿಯಲ್‌ಮಿ C2s, ಡ್ಯಯೆಲ್ ಕ್ಯಾಮೆರಾ ರಿಯರ್ ಸೆಟ್‌ಆಪ್ ಹೊಂದಿದ್ದು, 4,000 ಎಮ್ಎಹೆಚ್ ಬ್ಯಾಟರಿ ಪ್ಯಾಕಪ್ ಹೊಂದಿದೆ. ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಗ್ರಾಹಕ ಸ್ನೇಹಿ ಆಗಿದೆ. ಈ ಸ್ಮಾರ್ಟ್‌ಫೋನ್ 3GB RAM + 32GB ಶೇಖರಣಾ ಸಾಮರ್ಥ್ಯವನ್ನ ಹೊಂದಿದೆ. ಸದ್ಯ ಇದರ ಥೈಲ್ಯಾಂಡ್ ಮಾರುಕಟ್ಟೆಯಲ್ಲಿ ಖರೀದಗೆ ಲಭ್ಯವಿರುವ ಈ ಸ್ಮಾರ್ಟ್‌ಫೋನ್ ಬೆಲೆ THB 1,290 (ಅಂದಾಜು 3,000 ರೂ.) ಆಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸಿಮ್ ಅನ್ನು ಬೆಂಬಲಿಸಲಿದ್ದು, ಆಂಡ್ರಾಯ್ಡ್ ಪೈ ಅನ್ನು ಕಲರ್ಓಎಸ್ 6.1 ಮೂಲಕ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಹೊಸ ರಿಯಲ್‌ಮಿ ಫೋನ್ 19.5: 9 ಆಸ್ಪೆಕ್ಟ್ ಅನುಪಾತ ಹೊಂದಿದ್ದು, 720x1560 ಪಿಕ್ಸೆಲ್ ಸೆನ್ಸಾರ್ ಹೊಂದಿರುವ 6.1-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಡಿಸ್‌ಪ್ಲೇಯನ್ನು ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಲೆಯರ್‌ನಿಂದ ರಕ್ಷಿಸಲಾಗಿದೆ.

ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ ಪಿ 22SOC ಪ್ರೊಸೆಸರ್ ಹೊಂದಿದೆ. ಜೊತೆಗೆ 3GB RAM + 32GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು,ಇದನ್ನು ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ F/ 2.2 ಲೆನ್ಸ್ ಅನ್ನು ಒಳಗೊಂಡಿದೆ. ಜೊತೆಗೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ F/ 2.4 ಲೆನ್ಸ್‌ಹೊಂದಿದೆ. 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.

ಅಲ್ಲದೆ ರಿಯಲ್‌ಮಿ C2s ಸ್ಮಾರ್ಟ್‌ಫೋನ್ 4,000Mah ಬ್ಯಾಟರಿ ಪ್ಯಾಕ್‌ಆಪ್ ಹೊಂದಿದೆ. ಸ್ಮಾರ್ಟ್‌ಫೋನ್‌ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4GVOLTE, ವೈ-ಫೈ, ಬ್ಲೂಟೂತ್ ವಿ 4.2, ಜಿಪಿಎಸ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ನೀಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಥೈಲ್ಯಾಂಡ್‌ನ 7-ಇಲೆವೆನ್ ಮಾರಾಟ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಥೈಲ್ಯಾಂಡ್ ದೇಶದಲ್ಲಿ ಟ್ರೂಮೋವ್ಹೆಚ್ ಮಾಸಿಕ(EMI ) ಯೋಜನೆಯೊಂದಿಗೆ ಖರೀದಿಸಬಹುದಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190