ಭಾರತದಲ್ಲಿ 'ರಿಯಲ್‌ ಮಿ C3' ಲಾಂಚ್!..ಬೆಲೆ 6999ರೂ!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಈಗಾಗ್ಲೆ ಸಂಚಲನ ಸೃಷ್ಟಿಸಿರುವ ಕಂಪೆನಿಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದು. ಕೇವಲ ಮೂರುವರೆ ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವ ರಿಯಲ್‌ಮಿ ಈಗಾಗ್ಲೆ ಟಾಪ್‌ 5 ಸ್ಮಾರ್ಟ್‌ಫೋನ್‌ಗಳ ಸಾಲಿಗೆ ಸೇರುವ ಹಾದಿಯಲ್ಲಿದೆ. ಸದ್ಯ ಇದೀಗ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ರಿಯಲ್‌ಮಿ c3 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಹೊಸ ಫೀಚರ್ಸ್‌ಗಳನ್ನ ಪರಿಚಯಿಸಿದೆ.

ಹೌದು

ಹೌದು ಚೀನಾ ಮೂಲದ ರಿಯಲ್‌ ಮಿ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಪೋನ್‌ ರಿಯಲ್‌ಮಿ C3 ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ನಾಚ್‌ ಶೈಲಿಯ ಡಿಸ್‌ಪ್ಲೇಯನ್ನ ಹೊಂದಿದ್ದು, 5000mAh ಬ್ಯಾಟರಿ ಪ್ಯಾಕಪ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್ ನಾಚ್‌ ಶೈಲಿಯನ್ನ ಒಳಗೊಂಡಿದೆ.
ಇನ್ನು ಸ್ಕ್ರೀನ್-ಟು-ಬಾಡಿ ಅನುಪಾತ 89.8% ರಷ್ಟಿದೆ. ಜೊತೆಗೆ ಡಿಸ್‌ಪ್ಲೇ ಪ್ರೊಟೆಕ್ಷನ್‌ಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ನೀಡಲಾಗಿದೆ. ಈ ಡಿಸ್‌ಪ್ಲೇ 270 ಪಿಪಿಐ ಸಾಂದ್ರತೆಯನ್ನ ಹೊಂದಿದ್ದು, ಇದು ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್, ಮಲ್ಟಿ-ಟಚ್ ಸ್ಕ್ರೀನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರಿಯಲ್‌ಮಿ C3 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ ಜಿ 70 ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು 3GB RAM ಮತ್ತು 32GB ಸ್ಟೋರೇಜ್‌ ಹಾಗೂ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೂ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು. ಮೊದಲನೇ ಕ್ಯಾಮೆರಾ 12ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಎರಡನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 5ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಕ್ಯಾಮೆರಾಗಳಲ್ಲಿ 4 x ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್‌ ದಿ ಫೋಕಸ್, 4000 x 3000 ಪಿಕ್ಸೆಲ್‌ ಇಮೇಜ್‌ ರೆಸಲ್ಯೂಶನ್‌, ಹೈ ಡೈನಾಮಿಕ್ ರೇಂಜ್ ಮೋಡ್ ನಂತಹ ಫೀಚರ್ಸ್‌ಗಳನ್ನ ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ರಿಯಲ್‌ಮಿ C3 ಸ್ಮಾರ್ಟ್‌ಫೋನ್‌ 5000mAh ಬ್ಯಾಟರಿ ಪ್ಯಾಕ್‌ಆಪ್‌ ಅನ್ನು ಹೊಂದಿದ್ದು, ಇದು 43.9 ಗಂಟೆಗಳ ಟಾಕ್ ಟೈಮ್, 10.6 ಗಂಟೆಗಳ PUBG, 20.8 ಗಂಟೆಗಳ ಆನ್‌ಲೈನ್ ಮೂವಿ ಪ್ಲೇಬ್ಯಾಕ್ ಮತ್ತು 727.7 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ಪ್ಯಾಕ್‌ಆಪ್‌ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz ವೈ-ಫೈ, ಯುಎಸ್‌ಬಿ ಒಟಿಜಿ, ಮೈಕ್ರೋ ಯುಎಸ್‌ಬಿ ಪೋರ್ಟ್, ವೋಲ್ಟ್‌ಇ, ಬ್ಲೂಟೂತ್ 5, ಜಿಪಿಎಸ್ ,ಎ-ಜಿಪಿಎಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸರ್, ಗೈರೊ-ಮೀಟರ್ ಮತ್ತು ಅಕ್ಸೆಲೆರೊಮೀಟರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಈ ಸ್ಮಾರ್ಟ್‌ಫೋನ್‌ ಬಜೆಟ್‌ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, ರಿಯಲ್‌ಮಿ C3 ಭಾರತದಲ್ಲಿ 3GB RAM ಮತ್ತು 32GB ಶೇಖರಣಾ ಸಾಮರ್ಥ್ಯದ ಆಯ್ಕೆಗೆ 6,999,ರೂ ಮತ್ತು 4GB RAM ಮತ್ತು 64GB ಶೇಖರಣಾ ಮಾದರಿಗೆ 7,999 ರೂ.ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೆಬ್ರವರಿ 14 ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌, ರಿಯಲ್‌ಮಿ.ಕಾಮ್ ಮೂಲಕ ಲಭ್ಯವಾಗಲಿದ್ದು, ಬ್ಲೇಜಿಂಗ್ ರೆಡ್ ಮತ್ತು ಫ್ರೋಜನ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme C3 sports a waterdrop-style notch, is powered by the MediaTek Helio G70 SoC, and is offered in two colour options.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X