ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ C30 ಫೋನ್ ಸೇಲ್! ಆಫರ್ ಬೆಲೆ ಎಷ್ಟು?
ಅಗ್ಗದ ಬೆಲೆಯಲ್ಲಿ ಗಮನ ಸೆಳೆದಿರುವ ರಿಯಲ್‌ಮಿ C30 ಸ್ಮಾರ್ಟ್‌ಫೋನ್ ಇಂದು ಮಾರಾಟಕ್ಕೆ ಸಿದ್ಧವಾಗಿದೆ. ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ. ಇದು ಎಂಟ್ರಿ ಲೆವೆಲ್ ಮಾದರಿಯ ಫೋನ್ ಆಗಿದ್ದು, ಇದರ ಆರಂಭಿಕ ಬೆಲೆ 6,749 ರೂ. ಆಗಿದೆ. ಜೊತೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳು ಲಭ್ಯವಾಗಲಿವೆ.

ಹೌದು, ರಿಯಲ್‌ಮಿ C30 ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 5) ಮಾರಾಟ ನಡೆಸಲಿದೆ. ಗ್ರಾಹಕರು 5,999 ರೂ. ಆಫರ್ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಖರೀದಿಸಬಹುದಾಗಿದೆ. ಆಫರ್‌ಗಳಲ್ಲಿ ICICI ಬ್ಯಾಂಕ್ ಗ್ರಾಹಕರಿಗೆ ರಿಯಾಯಿತಿಗಳು ಮತ್ತು ಏರ್‌ಟೆಲ್ ಗ್ರಾಹಕರಿಗೆ 750 ರೂ. ವರೆಗೆ ರಿಯಾಯಿತಿಗಳು ಸೇರಿವೆ. ಈ ಫೋನ್ ಇದು "ವರ್ಟಿಕಲ್ ಸ್ಟ್ರೈಪ್" ವಿನ್ಯಾಸವನ್ನು ಹೊಂದಿದ್ದು, ತುಂಬಾ ಹಗುರವಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ನಾಚ್ ಶೈಲಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು "ವರ್ಟಿಕಲ್ ಸ್ಟ್ರೈಪ್" ವಿನ್ಯಾಸವನ್ನು ಹೊಂದಿರುವುದರಿಂದ ತುಂಬಾ ನಯವಾದ ಸ್ಮಾರ್ಟ್‌ಫೋನ್ ಆಗಿದೆ. ಈ ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಎಐ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಜೊತೆಗೆ 5000mah ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C30 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲಿಸಲಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 400ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ. ಜೊತೆಗೆ ಇದು 60Hz ರಿಫ್ರೆಶ್ ರೇಟ್ ಹೊಂದಿದ್ದು, ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಹೊಂದಿದೆ.

ಪ್ರೊಸೆಸರ್ ಹೇಗಿದೆ?
ರಿಯಲ್‌ಮಿ C30 ಸ್ಮಾರ್ಟ್‌ಫೋನ್ ಯುನಿಸೋಕ್ T612 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು CPU ಆಕ್ಟಾ-ಕೋರ್ 1.82 GHz GPU ಮಾಲಿ-G57 ಸಪೋರ್ಟ್ ಅನ್ನು ಕೂಡ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಿದೆ.

ಕ್ಯಾಮೆರಾ ಯಾವುದು?
ಈ ಸ್ಮಾರ್ಟ್‌ಫೋನ್ ಫ್ರಂಟ್ ಹಾಗೂ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಹಿಂಭಾಗದ ಕ್ಯಾಮೆರಾ 8 ಮೆಗಾಪಿಕ್ಸೆಲ್ AI ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು f/2.2 ಅಪರ್ಚರ್ ಮತ್ತು 3P ಲೆನ್ಸ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಮೂಲಕ 1080p @30fps ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ. ಹಾಗೆಯೇ ಈ ಕ್ಯಾಮೆರಾ HDR, AR ಸ್ಟಿಕ್ಕರ್, ಸ್ಲೋ ಮೋಷನ್, ಪೋರ್ಟ್ರೇಟ್ ಮೋಡ್, ಬ್ಯೂಟಿ ಮೋಡ್, AI ಕ್ಯಾಮೆರಾದಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರಿಯಲ್‌ಮಿ C30 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಬ್ಯಾಟರಿ ಬಾಕ್ಸ್‌ನ ಹೊರಗೆ ಸ್ಟ್ಯಾಂಡರ್ಡ್ 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಸೆಟ್ ಜ್ಯಾಕ್, ಮೈಕ್ರೋ ಯುಎಸ್‌ಬಿ, ಬ್ಲೂಟೂತ್ 5.0 ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್, ಫೇಸ್ ಅನ್‌ಲಾಕ್ ಅನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ C30 ಫೋನ್ ಅನ್ನು ಎರಡು RAM ಮಾದರಿಗಳಲ್ಲಿ ಲಭ್ಯವಿದೆ. ಬೇಸ್ ವೇರಿಯಂಟ್ 2GB RAM ಅನ್ನು 32GB ಸಂಗ್ರಹದೊಂದಿಗೆ ಪ್ಯಾಕ್ ಮಾಡುತ್ತದೆ, ಇದರ ಬೆಲೆ 6,749ರೂ. ಆಗಿದೆ. ಮತ್ತೊಂದು ಮಾದರಿಯು 3GB RAM ಮತ್ತು 32GB ಸಂಗ್ರಹದೊಂದಿಗೆ ಬರುತ್ತದೆ. ಇದರ ಬೆಲೆ 7,549ರೂ. ಆಗಿದೆ.

ರಿಯಲ್‌ಮಿ ಪ್ಯಾಡ್ X ಫೀಚರ್ಸ್
ರಿಯಲ್‌ಮಿ ಪ್ಯಾಡ್ X 11 ಇಂಚಿನ WUXGA+ ಫುಲ್ ವ್ಯೂ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಇದು 84.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಈ ಟ್ಯಾಬ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಹೆಚ್ಚುವರಿ ಸ್ಟೋರೇಜ್ ಅನ್ನು ವರ್ಚುವಲ್ RAM ಆಗಿ 5GB ವರೆಗೆ ವಿಸ್ತರಿಸುವುದಕ್ಕೆ ಅವಕಾಶವಿದೆ.

ಇನ್ನು ರಿಯಲ್‌ಮಿ ಪ್ಯಾಡ್ X ಸ್ಮಾರ್ಟ್ ಟ್ಯಾಬ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಫ್ರಂಟ್-ಫೇಸಿಂಗ್ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇನ್ನು ಈ ಪ್ಯಾಡ್ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 8,340 mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇದು 1.5 ತಿಂಗಳ ಸ್ಟ್ಯಾಂಡ್‌ಬೈ ಟೈಂ, 11 ಗಂಟೆಗಳ ವೀಡಿಯೊ ಕಾಲ್ ಟೈಂ, 19 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಮತ್ತು 138 ಗಂಟೆಗಳವರೆಗೆ ಮ್ಯೂಸಿಕ್ ಸ್ಟ್ರೀಮಿಂಗ್ ಟೈಂ ನೀಡಲಿದೆ ಎಂದು ರಿಯಲ್‌ಮಿ ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








