ದೇಶಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್‌ಮಿ C30! ಬೆಲೆ ಎಷ್ಟು? ವಿಶೇಷತೆ ಏನು?

|

ರಿಯಲ್‌ಮಿ ಕಂಪೆನಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಏರುಗತಿಯಲ್ಲಿ ಜನಪ್ರಿಯತೆ ಸಾಧಿಸುತ್ತಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕಡಿಮೆ ಅವಧಿಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆಯುವಲ್ಲಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದು ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ "ವರ್ಟಿಕಲ್ ಸ್ಟ್ರೈಪ್" ವಿನ್ಯಾಸವನ್ನು ಹೊಂದಿರುವುದು ಇದರ ವಿಶೇಷತೆಯಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ತುಂಬಾ ನಯವಾದ ವಿನ್ಯಾಸವನ್ನು ಹೊಂದಿರುವ ಸ್ಮಾರ್ಟ್‌ಫೋನ್‌ ಆಗಿದೆ. ಇದಲ್ಲದೆ ಈ ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಎಐ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬೆಂಬಲಿಸಲಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ CPU ಆಕ್ಟಾ-ಕೋರ್ 1.82 GHz GPU ಮಾಲಿ-G57 ಸಪೋರ್ಟ್‌ ಅನ್ನು ಕೂಡ ಹೊಂದಿದೆ. ಈ ಫೋನ್‌ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಈ ಸ್ಮಾರ್ಟ್‌ಫೋನ್‌ ಫ್ರಂಟ್‌ ಹಾಗೂ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಹಿಂಭಾಗದ ಕ್ಯಾಮೆರಾ 8 ಮೆಗಾಪಿಕ್ಸೆಲ್ AI ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು f/2.2 ಅಪರ್ಚರ್ ಮತ್ತು 3P ಲೆನ್ಸ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಮೂಲಕ 1080p @30fps ವೀಡಿಯೊ ರೆಕಾರ್ಡಿಂಗ್‌ ಮಾಡಬಹುದಾಗಿದೆ. ಹಾಗೆಯೇ ಈ ಕ್ಯಾಮೆರಾ HDR, AR ಸ್ಟಿಕ್ಕರ್, ಸ್ಲೋ ಮೋಷನ್, ಪೋರ್ಟ್ರೇಟ್ ಮೋಡ್, ಬ್ಯೂಟಿ ಮೋಡ್, AI ಕ್ಯಾಮೆರಾದಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C30 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಬ್ಯಾಟರಿ ಬಾಕ್ಸ್‌ನ ಹೊರಗೆ ಸ್ಟ್ಯಾಂಡರ್ಡ್ 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಸೆಟ್ ಜ್ಯಾಕ್, ಮೈಕ್ರೋ ಯುಎಸ್‌ಬಿ, ಬ್ಲೂಟೂತ್ 5.0 ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್, ಫೇಸ್ ಅನ್‌ಲಾಕ್ ಅನ್ನು ಕೂಡ ಒಳಗೊಂಡಿದೆ.

"ವರ್ಟಿಕಲ್ ಸ್ಟ್ರೈಪ್" ವಿನ್ಯಾಸ

ರಿಯಲ್‌ಮಿ ಕಂಪೆನಿ ಈ ಸ್ಮಾರ್ಟ್‌ಫೋನ್‌ ಅನ್ನು "ವರ್ಟಿಕಲ್ ಸ್ಟ್ರೈಪ್" ವಿನ್ಯಾಸ ಎಂದು ಹೇಳಿದೆ. ಏಕೆಂದರೆ ಈ ಸ್ಮಾರ್ಟ್‌ಫೋನ್‌ ಕೇವಲ 8.5 ಮಿಮೀ ಥಿಕ್‌ನೆಸ್‌ ಮತ್ತು 182 ಗ್ರಾಂ ತೂಕವನ್ನು ಹೊಂದಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ತುಂಬಾ ಹಗುರವಾಗಿದೆ. ಇದನ್ನು ಹಿಡಿದಿಡಲು ಮತ್ತು ಬಳಸಲು ಸುಲಭ ಮತ್ತು ಆರಾಮದಾಯಕವಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ ಭಾರತದಲ್ಲಿ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 7,499 ರೂ. ಬೆಲೆಯನ್ನು ಹೊಂದಿದೆ. ಇದರ ಟಾಪ್ ಎಂಡ್ ಮಾಡೆಲ್ 3GB RAM ಮತ್ತು 32GB ಇಂಟರ್ನಲ್ ಸ್ಟೋರೇಜ್ ಆಯ್ಕೆಗೆ 8,299ರೂ.ಬೆಲೆಯನ್ನು ಹೊಂದಿದೆ. ಈ ಎರಡೂ ಮಾದರಿಗಳು ಇದೇ ಜೂನ್ 27 ರಿಂದ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್‌ನಲ್ಲಿ ಲಭ್ಯವಿರುತ್ತವೆ. ಈ ಫೋನ್‌ ಲೇಕ್ ಬ್ಲೂ, ಬ್ಯಾಂಬೂ ಗ್ರೀನ್ ಮತ್ತು ಡೆನಿಮ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ

ಇದಲ್ಲದೆ ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ರಿಯಲ್‌ಮಿ ನಾರ್ಜೊ 50 ಪ್ರೊ 5G ಫೋನ್‌ ಲಾಂಚ್‌ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 360Hz ಟಚ್ ಸ್ಯಾಂಪ್ಲಿಂಗ್ ದರ ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 5G ಪ್ರೊಸೆಸರ್ ಪವರ್‌ ಚಾಲಿತವಾಗಿದ್ದು, ಇದು 8GB ಯ RAM, 5GB ವರ್ಚುವಲ್ RAM ಮತ್ತು 128GB ಯ ಸ್ಟೋರೇಜ್ ಸ್ಥಳದೊಂದಿಗೆ ಸಂಯೋಜಿಸಲ್ಪಟ್ಟಿದೆ. ಹಾಗೆಯೇ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಟ್ರಿಪಲ್‌

ಇನ್ನು ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಒಳಗೊಂಡಿದೆ. 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 5,000mAh ಬ್ಯಾಟರಿ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 33W ಡಾರ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ರಿಯಲ್‌ಮಿ ನಾರ್ಜೊ 50 ಪ್ರೊ 5G ಫೋನಿನ 6 + 128 GB ಬೇಸ್‌ ವೇರಿಯಂಟ್‌ ದರವು 19,999 ರೂ. ಆಗಿದೆ. ಅದೇ ರೀತಿ 8 + 128 GB ವೇರಿಯಂಟ್‌ ಬೆಲೆ 21,999 ರೂ. ಆಗಿದೆ.

Best Mobiles in India

English summary
The smartphone is backed by a 5000mAh battery with support for a standard 10W charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X