Just In
- 15 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 17 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 17 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 19 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- News
Vishnuvardhan Memorial: ಇಂದು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ, ವಿಷ್ಣು ಅಭಿಮಾನಿಗಳ ಅಸಮಾಧಾನವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Movies
Breaking: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
- Sports
ಮುಂದಿನ ತಿಂಗಳು ಬಿಸಿಸಿಐ ಹೊಸ ಒಪ್ಪಂದ: ಸೂರ್ಯ, ಪಾಂಡ್ಯ, ಗಿಲ್ಗೆ ಬಂಪರ್ ಸಾಧ್ಯತೆ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್‌ಮಿ C30s ಸೇಲ್ ಪ್ರಾರಂಭ!..7,499ರೂ.ಗೆ ಲಭ್ಯ!..ಫೀಚರ್ಸ್ ಏನು?
ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಅಗ್ಗದ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ರಿಯಲ್‌ಮಿ C30s ತನ್ನ ವರ್ಗದಲ್ಲೇ ಗಮನಾರ್ಹ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ. 23) ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಬಿಲಿಯನ್ ಡೇಸ್ ಸೇಲ್ 2022 ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಫಸ್ಟ್ ಸೇಲ್ ಪ್ರಾರಂಭಿಸಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 7,499 ರೂ. ಆಗಿದೆ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ C30s ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಫೋನ್ 2GB RAM + 32GB ವೇರಿಯಂಟ್ ಮತ್ತು 4GB RAM + 64GB ವೇರಿಯಂಟ್ ಆಯ್ಕೆ ಹೊಂದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಪ್ರಮುಖ ಹೈಲೈಟ್ ಎನಿಸಿದೆ.

ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಈ ಫೋನ್ ಆಕ್ಸಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವ ಗ್ರಾಹಕರಿಗೆ 1,500ರೂ. ಗಳ ಇನ್‌ಸ್ಟಂಟ್ ಡಿಸ್ಕೌಂಟ್ ಲಭ್ಯವಾಗಲಿದೆ. ಹಾಗೆಯೇ ಎಕ್ಸ್‌ಚೇಂಜ್ ಕೊಡುಗೆ, EMI ಆಯ್ಕೆಗಳು ಸಹ ದೊರೆಯುತ್ತದೆ. ಹಾಗಾದರೆ ರಿಯಲ್‌ಮಿ C30s ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C30s ಸ್ಮಾರ್ಟ್‌ಫೋನ್ 6.5 ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಪವರ್ ಯಾವುದು?
ರಿಯಲ್‌ಮಿ C30s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಯುನಿಸೋಕ್ SC9863A SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ ಇದು 2GB RAM + 32GB ವೇರಿಯಂಟ್ ಹಾಗೂ 4GB RAM + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ರಿಯಲ್‌ಮಿ C30s ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರಲ್ಲಿ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್ 30fps ನಲ್ಲಿ ಫುಲ್ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಮುಂಭಾಗದ ಕ್ಯಾಮೆರಾ 30fps ನಲ್ಲಿ HD ವೀಡಿಯೊಗಳನ್ನು ರೆಕಾರ್ಡ್ ಮಾಡುವುದಕ್ಕೆ ಅವಕಾಶ ನೀಡಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್ ಏನಿದೆ?
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz Wi-Fi, ಬ್ಲೂಟೂತ್ v4.2, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB 2.0 ಮೈಕ್ರೋ-ಯುಎಸ್‌ಬಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ Dirac 3.0 ಟೆಕ್ನಾಲಜಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದ್ದು, ಮೈಕ್ರೋ ಟೆಕ್ಸ್ಚರ್, ಸ್ಲಿಪ್ ರೆಸಿಸ್ಟೆಂಟ್ ವಿನ್ಯಾಸವನ್ನು ಹೊಂದಿದೆ. ಈ ಫೋನ್ 75.7x164.2x8.5mm ಸುತ್ತಳತೆ ಹೊಂದಿದ್ದು, 186 ಗ್ರಾಂ ತೂಕವನ್ನು ಪಡೆದಿದೆ.

ಈ ಫೋನಿನ ಬೆಲೆ ಎಷ್ಟಿದೆ?
ರಿಯಲ್‌ಮಿ C30s ಸ್ಮಾರ್ಟ್‌ಫೋನ್ 2GB RAM + 32GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ 7,499ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಆಯ್ಕೆಗೆ 8,999ರೂ. ಬೆಲೆಯನ್ನು ನಿಗಧಿಪಡಿಸಲಾಗಿದೆ. ಇದು ಸ್ಟ್ರೈಪ್ ಬ್ಲ್ಯಾಕ್ ಮತ್ತು ಸ್ಟ್ರೈಪ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470