Just In
- 11 hrs ago
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
- 13 hrs ago
ಜಿಯೋದ ಈ ಪ್ಲ್ಯಾನ್ ಸಖತ್ ಆಗಿದೆ!..ರೀಚಾರ್ಜ್ ಮಾಡಬೇಕಾ?.ಬೇಡವೇ?
- 13 hrs ago
ದೃಷ್ಟಿಹೀನರಿಗಾಗಿ ಹೊಸ ಸ್ಮಾರ್ಟ್ವಾಚ್; ಇದು ಹೇಗೆಲ್ಲಾ ಕೆಲಸ ಮಾಡಲಿದೆ!?
- 15 hrs ago
Vivo X90 Pro : ಲಾಂಚ್ ಆಗಿಯೇ ಬಿಡ್ತು 'ವಿವೋ X90 ಪ್ರೊ' ಫೋನ್; ಖರೀದಿಗೆ ಕ್ಯೂ ಖಚಿತ!
Don't Miss
- Sports
ಗೆದ್ದ ಜಯ್ ಶಾ ಹಠ, ಪಾಕ್ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Movies
Ramachari Serial: ವಿಹಾನ್ ಬಳಿ ಸತ್ಯ ಹೇಳಿಬಿಟ್ಟ ಚಾರು!
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ರಿಯಲ್‌ಮಿ C30s ಸ್ಮಾರ್ಟ್‌ಫೋನ್!
ರಿಯಲ್‌ಮಿ ಕಂಪೆನಿ ಭಾರತದ ಮಾರುಕಟ್ಟೆಗೆ ಅಗ್ಗದ ಬೆಲೆಯ ರಿಯಲ್‌ಮಿ C30s ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಆಕ್ಟಾ-ಕೋರ್ ಯುನಿಸೋಕ್ SC9863A SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ರಿಯಲ್‌ಮಿ C30s ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದ್ದು,30fps ನಲ್ಲಿ ಫುಲ್ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ C30s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೈಕ್ರೋ-ಟೆಕ್ಸ್ಚರ್ ಸ್ಲಿಪ್-ರೆಸಿಸ್ಟೆಂಟ್ ವಿನ್ಯಾಸವನ್ನು ಹೊಂದಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಈ ಫೋನ್ ಸ್ಟ್ರೈಪ್ ಬ್ಲ್ಯಾಕ್ ಮತ್ತು ಸ್ಟ್ರೈಪ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C30s ಸ್ಮಾರ್ಟ್‌ಫೋನ್ 6.5 ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲವೇನು?
ರಿಯಲ್‌ಮಿ C30s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೋಕ್ SC9863A SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ರಿಯಲ್‌ಮಿ C30s 8 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರಲ್ಲಿ ಹಿಂಬದಿಯ ಕ್ಯಾಮೆರಾ ಸೆಟಪ್ 30fps ನಲ್ಲಿ ಫುಲ್ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಮುಂಭಾಗದ ಕ್ಯಾಮೆರಾ 30fps ನಲ್ಲಿ HD ವೀಡಿಯೊಗಳನ್ನು ರೆಕಾರ್ಡ್ ಮಾಡುವುದಕ್ಕೆ ಅವಕಾಶ ನೀಡಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್ ಏನಿದೆ?
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz Wi-Fi, ಬ್ಲೂಟೂತ್ v4.2, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB 2.0 ಮೈಕ್ರೋ-ಯುಎಸ್‌ಬಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ Dirac 3.0 ಟೆಕ್ನಾಲಜಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದ್ದು, ಮೈಕ್ರೋ-ಟೆಕ್ಸ್ಚರ್ ಸ್ಲಿಪ್-ರೆಸಿಸ್ಟೆಂಟ್ ವಿನ್ಯಾಸವನ್ನು ಹೊಂದಿದೆ.

ಬೆಲೆ ಎಷ್ಟಿದೆ?
ರಿಯಲ್‌ಮಿ C30s ಸ್ಮಾರ್ಟ್‌ಫೋನ್ 2GB RAM + 32GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ 7,499ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಆಯ್ಕೆಗೆ 8,999ರೂ. ಬೆಲೆಯನ್ನು ನಿಗಧಿಪಡಿಸಲಾಗಿದೆ. ಇದು ಸ್ಟ್ರೈಪ್ ಬ್ಲ್ಯಾಕ್ ಮತ್ತು ಸ್ಟ್ರೈಪ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.

ಲಭ್ಯತೆ ಯಾವಾಗ?
ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಸೆಪ್ಟೆಂಬರ್ 22ರ ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರಿಗೆ ಖರೀದಿಗೆ ಲಭ್ಯವಾಗಲಿದೆ. ಆದರೆ ಇನ್ನುಳಿದ ಗ್ರಾಹಕರು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಇಂಡಿಯಾ ಆನ್‌ಲೈನ್ ಸ್ಟೋರ್‌ನಿಂದ ಸೆಪ್ಟೆಂಬರ್ 23 ರಂದು ಖರೀದಿಸಲು ಸಾಧ್ಯವಾಗಲಿದೆ. ಅಂದರೆ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಮಾರಾಟವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470