Home
ಸುದ್ದಿಜಾಲ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!.ಅಗ್ಗದ ಬೆಲೆಗೆ ಲಭ್ಯ!

ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ರಿಯಲ್‌ಮಿ C31 ಸ್ಮಾರ್ಟ್‌ಫೋನ್ ಅನ್ನು ಇತ್ತೀಚಿಗೆ ಬಿಡುಗಡೆ ಮಾಡಿದ್ದು, ಈ ಫೋನ್ ಅಗ್ಗದ ಬೆಲೆಯೊಂದಿಗೆ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏ 6) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 3GB + 32GB ಸ್ಟೋರೇಜ್‌ನ ಆರಂಭಿಕ ಬೆಲೆಯು 8,999 ರೂ. ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ C31 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 12nm ಯೂನಿಸೊಕ್‌ T612 ಪ್ರೊಸೆಸರ್ ಅನ್ನು ಒಳಗೊಂಡಿದೆ. 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನುಳಿದಂತೆ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 12nm ಯೂನಿಸೊಕ್‌ T612 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಅಪರ್ಚರ್ ಲೆನ್ಸ್ ಮತ್ತು 4x ಡಿಜಿಟಲ್ ಜೂಮ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಮತ್ತು ಮೂರನೇ ಕ್ಯಾಮೆರಾ ಮೊನೊಕ್ರೋಮ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸ್ಟ್ಯಾಂಡ್‌ಬೈನಲ್ಲಿ 45 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi (2.4 GHz), ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಲೈಟ್‌ ಸೆನ್ಸಾರ್‌, ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸಾರ್‌ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 3 GB + 32 GB ಸ್ಟೋರೇಜ್ ಮಾದರಿಗೆ 8,999ರೂ. ಬೆಲೆ ಹೊಂದಿದೆ. ಆದರೆ 4 GB + 64 GB ರೂಪಾಂತರದ ಬೆಲೆ 9,999ರೂ.ಆಗಿದೆ. ಈ ಫೋನ್‌ ಡಾರ್ಕ್‌ ಗ್ರೀನ್‌ ಮತ್ತು ಲೈಟ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ರಿಯಲ್‌ಮಿ ಕಂಪನಿಯ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 6 ರಂದು ಮಧ್ಯಾಹ್ನ 12 ಗಂಟೆಗೆ ಫಸ್ಟ್‌ ಸೇಲ್‌ ನಡೆಯಲಿದೆ.

Best Mobiles in India

English summary
Realme C31 First Sale Today Via Flipkart: Price and Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+