ಭಾರತದಲ್ಲಿ ಮಾರ್ಚ್‌ 31ಕ್ಕೆ ಎಂಟ್ರಿ ನೀಡಲಿದೆ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌!

|

ರಿಯಲ್‌ಮಿ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಅನ್ನು ಇದೇ ಮಾರ್ಚ್ 31 ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿದ್ದು, ಬಜೆಟ್‌ ಬೆಲೆಯಿಂದ ಗಮನ ಸೆಳೆದಿದೆ. ಇನ್ನು ಈ ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಮತ್ತು ರಿಯರ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಒಳಗೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಪ್ಲಾನ್‌ ರೂಪಿಸಿದೆ. ಸದ್ಯ ರಿಯಲ್‌ಮಿ ಕಂಪೆನಿ ತನ್ನ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ C31 ಫೋನ್‌ನ ಫೀಚರ್ಸ್‌ಗಳು ಮತ್ತು ವಿಶೇಷತೆಗಳನ್ನು ಅನಾವರಣಗೊಳಿಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ "ಡೈನಾಮಿಕ್ ಟೆಕ್ಸ್ಚರ್ ಡಿಸೈನ್" ನೊಂದಿಗೆ ಬರುತ್ತದೆ ಎಂದು ಹೇಳಲಾಗಿದೆ. ಜೊತೆಗೆ ಫೋನ್ ಬಲಭಾಗದಲ್ಲಿರುವ ಪವರ್ ಬಟನ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ನೀಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 900x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಜೊತೆಗೆ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದ್ದು, 88.7% ರ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು 12nm ಪ್ರಕ್ರಿಯೆಯನ್ನು ಆಧರಿಸಿದೆ. ಈ ಪ್ರೊಸೆಸರ್‌ ಲೊ-ಲೇವೆಲ್‌ ಆಗಿದೆ, ಅಂದರೆ ಹಗುರವಾದ ಕಾರ್ಯಗಳಿಗೆ ಸೂಕ್ತವಾಗಿದೆ. ಹಾಗೆಯೇ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಕಪ್ಪು-ಬಿಳುಪು ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ವಾಟರ್‌ಡ್ರಾಪ್ ಶೈಲಿಯ ನಾಚ್‌ನೊಳಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಒಂದು ದಿನ ಸುಲಭವಾಗಿ ಬಾಳಿಕೆ ಬರುವ ಸಾಧ್ಯತೆಯಿದೆ. ಈ ಬ್ಯಾಟರಿ 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಕನಿಷ್ಠ ಎರಡು ಗಂಟೆಗಳ ಕಾಲ ಅದನ್ನು ಬಿಡಬೇಕಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ೯ Wi-Fi, ಬ್ಲೂಟೂತ್, GPS ಮತ್ತು ಡ್ಯುಯಲ್-ಸಿಮ್, ಡ್ಯುಯಲ್-ಸ್ಟ್ಯಾಂಡ್‌ಬೈ 4G LTE, USB-C ಪೋರ್ಟ್ ಇದೆ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಈಗಾಗಲೇ ಇಂಡೋನೇಷ್ಯಾದಲ್ಲಿ IDR 1,599,00 ಗೆ ಬಿಡುಗಡೆ ಆಗಿದೆ. ಈ ಫೋನ್‌ ಭಾರತದಲ್ಲಿ ಸರಿಸುಮಾರು 8,500ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಡಾರ್ಕ್‌ ಗ್ರೀನ್‌ ಮತ್ತು ಲೈಟ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಬರುತ್ತದೆ. ಈ ಫೋನ್‌ ಇದೇ ಮಾರ್ಚ್ 31 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.

Most Read Articles
Best Mobiles in India

English summary
Realme C31 will launch in India on March 31

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X