Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಟ್ಟ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಏರುಗತಿಯಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ C31 ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ರಿಯಲ್‌ಮಿ C31

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಯುನಿಸೊಕ್ T612 ಚಿಪ್‌ಸೆಟ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ R UI ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಾರ್ಕ್‌ ಗ್ರೀನ್‌ ಮತ್ತು ಲೈಟ್ ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 12nm ಯೂನಿಸೊಕ್‌ T612 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಅಪರ್ಚರ್ ಲೆನ್ಸ್ ಮತ್ತು 4x ಡಿಜಿಟಲ್ ಜೂಮ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಮತ್ತು ಮೂರನೇ ಕ್ಯಾಮೆರಾ ಮೊನೊಕ್ರೋಮ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸ್ಟ್ಯಾಂಡ್‌ಬೈನಲ್ಲಿ 45 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi (2.4 GHz), ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಲೈಟ್‌ ಸೆನ್ಸಾರ್‌, ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸಾರ್‌ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C31 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 3GB + 32GB ಸ್ಟೋರೇಜ್ ಮಾದರಿಗೆ 8,999ರೂ. ಬೆಲೆ ಹೊಂದಿದೆ. ಆದರೆ 4GB + 64GB ರೂಪಾಂತರದ ಬೆಲೆ 9,999ರೂ.ಆಗಿದೆ. ಈ ಫೋನ್‌ ಡಾರ್ಕ್‌ ಗ್ರೀನ್‌ ಮತ್ತು ಲೈಟ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ರಿಯಲ್‌ಮಿ ಕಂಪನಿಯ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 6 ರಂದು ಮಧ್ಯಾಹ್ನ 12 ಗಂಟೆಗೆ ಫಸ್ಟ್‌ ಸೇಲ್‌ ನಡೆಯಲಿದೆ.

Best Mobiles in India

English summary
Realme C31 price in India starts at Rs. 8,999 for the 3GB + 32GB storage model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+