Home
ಸುದ್ದಿಜಾಲ

ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಲಾಂಚ್!..ಬಜೆಟ್‌ ಬೆಲೆ!

ಜನಪ್ರಿಯ ರಿಯಲ್‌ಮಿ ಕಂಪೆನಿಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಬಜೆಟ್‌ ದರದ ಫೋನ್‌ಗಳು ಹೆಚ್ಚು ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಸಂಸ್ಥೆಯು ಈ ಹೊಸ ಫೋನ್‌ ಲಾಂಚ್ ಮಾಡಿ ಬಜೆಟ್‌ ಶ್ರೇಣಿ ವಿಸ್ತರಿಸಿದೆ. ಕಂಪನಿಯು ನೂತನವಾಗಿ ಭಾರತದಲ್ಲಿ ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಆಗಿದೆ.

ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಲಾಂಚ್!..ಬಜೆಟ್‌ ಬೆಲೆ!

ಹಾಗೆಯೇ ಈ ಸ್ಮಾರ್ಟ್‌ಫೋನ್‌ ಯುನಿಸೊಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 4GB+64GB ಮತ್ತು 4GB+128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಇದು ಪಡೆದಿದೆ. ಅಕ್ವಾ ಬ್ಲೂ, ಸೈಟ್‌ ಸೀ ಹಾಗೂ ಸ್ಯಾಂಡಿ ಗೋಲ್ಡ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ C33 2023 ಎಡಿಷನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಂಚ್-ಹೋಲ್ ವಿನ್ಯಾಸದ ಬದಲಿಗೆ ವಾಟರ್‌ಡ್ರಾಪ್ ಸ್ಟೈಲ್ ನೋಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಲಾಂಚ್!..ಬಜೆಟ್‌ ಬೆಲೆ!

ರಿಯಲ್‌ಮಿ C33 2023 ಎಡಿಷನ್‌ ಯುನಿಸೊಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB RAM + 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿರಾಕ್ 3.0 ತಂತ್ರಜ್ಞಾನ ಒಳಗೊಂಡ ಸ್ಪೀಕರ್ ಬೆಂಬಲವನ್ನು ಹೊಂದಿದೆ.

ರಿಯಲ್‌ಮಿ C33 2023 ಎಡಿಷನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಎಕ್ಸ್‌ಪರ್ಟ್ ಮೋಡ್ ಫೀಚರ್ಸ್‌ಗಳನ್ನು ಹೊಂದಿದೆ. ಈ ಕ್ಯಾಮೆರಾ ಮೂಲಕ 30fps ನಲ್ಲಿ 1080p ವೀಡಿಯೊ ರೆಕಾರ್ಡ್ ಮಾಡಲು ಸಾಧ್ಯವಾಗುತ್ತದೆ.

ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ ಲಾಂಚ್!..ಬಜೆಟ್‌ ಬೆಲೆ!

ರಿಯಲ್‌ಮಿ C33 2023 ಎಡಿಷನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ನೆಟ್‌ವರ್ಕ್‌, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಬೆಂಬಲವನ್ನು ಹೊಂದಿದೆ.

ಭಾರತದಲ್ಲಿ ರಿಯಲ್‌ಮಿ C33 2023 ಎಡಿಷನ್‌ ಸ್ಮಾರ್ಟ್‌ಫೋನ್‌ 4GB + 64GB ಮತ್ತು 4GB + 128GB ಎರಡು ವೇರಿಯಂಟ್‌ ಪಡೆದಿದೆ. 4GB + 64GB ಬೆಲೆಯು 9,999ರೂ. ಆಗಿದ್ದು, ಅದೇ ರೀತಿ 4GB + 128GB ವೇರಿಯಂಟ್‌ ಬೆಲೆಯು 10,499ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗೋಲ್ಡ್‌, ಆಕ್ವಾ ಬ್ಲೂ ಮತ್ತು ಕಪ್ಪು ಬಣ್ಣ ಸೇರಿದಂತೆ ಮೂರು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.

Best Mobiles in India

English summary
Realme C33 2023 Edition comes in 4GB+64GB and 4GB+128GB variants. More details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+