ಇಂದು ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!..ಬೆಲೆ ಎಷ್ಟು?

|

ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ಅಗ್ಗದ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ 12 ರಂದು) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ರಿಯಲ್‌ಮಿ C33 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 8999 ರೂ. ಆಗಿದೆ.

ಇದರೊಂದಿಗೆ

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ C33 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಯುನಿಸೊಕ್ T612 SoC ಪ್ರೊಸೆಸರ್‌ನಲ್ಲಿ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 3GB RAM + 32GB ಮತ್ತು 4GB RAM + 64GB ಸ್ಟೋರೇಜ್‌ ಆಯ್ಕೆಗಳಾಗಿವೆ. ಇನ್ನುಳಿದಂತೆ ರಿಯಲ್‌ಮಿ C33 ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೆಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೆಗಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಂಚ್-ಹೋಲ್ ವಿನ್ಯಾಸದ ಬದಲಿಗೆ ವಾಟರ್‌ಡ್ರಾಪ್ ಸ್ಟೈಲ್ ನೋಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಯುನಿಸೊಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 3GB RAM + 32GB ಮತ್ತು 4GB RAM + 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿರಾಕ್ 3.0 ತಂತ್ರಜ್ಞಾನ ಒಳಗೊಂಡ ಸ್ಪೀಕರ್ ಬೆಂಬಲವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಎಕ್ಸ್‌ಪರ್ಟ್ ಮೋಡ್ ಫೀಚರ್ಸ್‌ಗಳನ್ನು ಹೊಂದಿದೆ. ಈ ಕ್ಯಾಮೆರಾ ಮೂಲಕ 30fps ನಲ್ಲಿ 1080p ವೀಡಿಯೊ ರೆಕಾರ್ಡ್ ಮಾಡಲು ಸಾಧ್ಯವಾಗುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ನೆಟ್‌ವರ್ಕ್‌, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಬೆಂಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ "ಬೌಂಡ್‌ಲೆಸ್ ಸೀ ವಿನ್ಯಾಸ"ವನ್ನು ಹೊಂದಿದ್ದು,ದೊಂದಿಗೆ ಬರುತ್ತದೆ. ಇದರ ಬ್ಯಾಕ್‌ ಪ್ಯಾನಲ್‌ ಮಿನುಗುವ ಮರಳಿನ ಸಂಯೋಜಿತ ವಿನ್ಯಾಸವನ್ನು ಹೊಂದಿದೆ. ಇನ್ನು ವಾಲ್ಯೂಮ್ ಮತ್ತು ಪವರ್ ಬಟನ್‌ಗಳನ್ನು ಫೋನ್‌ನ ಬಲಭಾಗದಲ್ಲಿ ಇರಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ಮಾದರಿ ಆಯ್ಕೆಯ ಬೆಲೆ 8,999ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಯು ನಿಮಗೆ 9,999 ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗೋಲ್ಡ್‌, ಆಕ್ವಾ ಬ್ಲೂ ಮತ್ತು ಕಪ್ಪು ಬಣ್ಣ ಸೇರಿದಂತೆ ಮೂರು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 12 ರಿಂದ ಸೇಲ್‌ ಆಗಲಿದೆ.

Best Mobiles in India

English summary
Realme C33 Goes First Sale Today: Price in India, Offers, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X