Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ರಿಯಲ್‌ಮಿ C33 ಫೋನ್‌!

ರಿಯಲ್‌ಮಿ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದಲ್ಲಿ ಏರುಗತಿಯ ಜನಪ್ರಿಯತೆಯನ್ನು ಸಾಧಿಸುತ್ತಾ ಬಂದಿದೆ. ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕವೂ ಸಾಕಷ್ಟು ಸೌಂಡ್‌ ಮಾಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ರಿಯಲ್‌ಮಿ C33 ಅನ್ನು ಲಾಂಚ್‌ ಮಾಡಿದೆ. ಇದರ ಬೆಲೆ 8,999ರೂ ಆಗಿದ್ದು, ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಬಜೆಟ್‌ ಬೆಲೆಯ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇದಲ್ಲದೆ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೆಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೆಗಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದೆ. ಇದು 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಂಚ್-ಹೋಲ್ ವಿನ್ಯಾಸದ ಬದಲಿಗೆ ವಾಟರ್‌ಡ್ರಾಪ್ ಸ್ಟೈಲ್ ನೋಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಯುನಿಸೊಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB RAM + 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿರಾಕ್ 3.0 ತಂತ್ರಜ್ಞಾನ ಒಳಗೊಂಡ ಸ್ಪೀಕರ್ ಬೆಂಬಲವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಎಕ್ಸ್‌ಪರ್ಟ್ ಮೋಡ್ ಫೀಚರ್ಸ್‌ಗಳನ್ನು ಹೊಂದಿದೆ. ಈ ಕ್ಯಾಮೆರಾ ಮೂಲಕ 30fps ನಲ್ಲಿ 1080p ವೀಡಿಯೊ ರೆಕಾರ್ಡ್ ಮಾಡಲು ಸಾಧ್ಯವಾಗುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ನೆಟ್‌ವರ್ಕ್‌, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಬೆಂಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ "ಬೌಂಡ್‌ಲೆಸ್ ಸೀ ವಿನ್ಯಾಸ"ವನ್ನು ಹೊಂದಿದ್ದು,ದೊಂದಿಗೆ ಬರುತ್ತದೆ. ಇದರ ಬ್ಯಾಕ್‌ ಪ್ಯಾನಲ್‌ ಮಿನುಗುವ ಮರಳಿನ ಸಂಯೋಜಿತ ವಿನ್ಯಾಸವನ್ನು ಹೊಂದಿದೆ. ಇನ್ನು ವಾಲ್ಯೂಮ್ ಮತ್ತು ಪವರ್ ಬಟನ್‌ಗಳನ್ನು ಫೋನ್‌ನ ಬಲಭಾಗದಲ್ಲಿ ಇರಿಸಲಾಗಿದೆ. ಹೊಸ ಫೋನ್ "ಅಲ್ಟ್ರಾ-ಸ್ಲಿಮ್ ಬಾಡಿ" ಎಂದು ಕಂಪನಿ ಹೇಳಿಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ಮಾದರಿ ಆಯ್ಕೆಯ ಬೆಲೆ 8,999ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಯು ನಿಮಗೆ 9,999 ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗೋಲ್ಡ್‌, ಆಕ್ವಾ ಬ್ಲೂ ಮತ್ತು ಕಪ್ಪು ಬಣ್ಣ ಸೇರಿದಂತೆ ಮೂರು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 12 ರಿಂದ ಸೇಲ್‌ ಆಗಲಿದೆ.

Best Mobiles in India

English summary
Realme C33 With 5,000mAh Battery Launched in India: Specifiations
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+