ಭಾರತದಲ್ಲಿ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಕೂಡ ಪ್ರತಿಷ್ಠಿತ ಬ್ರ್ಯಾಂಡ್‌ ಎನಿಸಿಕೊಂಡಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಬಳಕೆದಾರರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 6 ರಂದು ಬಿಡುಗಡೆ ಆಗಲಿದೆ ಎಂದು ರಿಯಲ್‌ಮಿ ಕಂಪೆನಿ ಪ್ರಕಟಿಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 37 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಹೇಗಿರಬಹುದು ಎಂದು ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿರಲಿದೆ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿರಲಿದೆ

ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿವರಗಳು ಬಹಿರಂಗವಾಗಿಲ್ಲ. ಆದರೆ ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 400 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ
ವಾಟರ್‌ಡ್ರಾಪ್ ನಾಚ್‌ ವಿನ್ಯಾಸವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಯುನಿಸೊಕ್ ಟಿ 612 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದು
CPU ಆಕ್ಟಾ ಕೋರ್ ಸಪೋರ್ಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಲಿದೆ ಎನ್ನಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ಯಾಮೆರಾ ಅತ್ಯಧಿಕ ಪಿಕ್ಸೆಲ್-ಕಾರ್ಯಕ್ಷಮತೆಯನ್ನು ನೀಡುತ್ತದೆ, ಸ್ಪಷ್ಟವಾದ ಬ್ಯಾಕ್‌ಲಿಟ್ ಫೋಟೋಗಳಿಗಾಗಿ CHDR ಅಲ್ಗಾರಿದಮ್‌ನೊಂದಿಗೆ ಬರುತ್ತದೆ ಎಂದು ಊಹಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪ್ಯಾಕ್ ಮಾಡಲಿದೆ. ಇದು 37 ದಿನಗಳ ಸ್ಟ್ಯಾಂಡ್‌ಬೈ ಅನ್ನು ನೀಡುತ್ತದೆ ಎಂದು ಹೇಳಲಾಗಿದೆ. ವಿಸ್ತೃತ ಬ್ಯಾಟರಿ ಬಾಳಿಕೆಗಾಗಿ ಫೋನ್ ಅಲ್ಟ್ರಾ ಸೇವಿಂಗ್ ಮೋಡ್ ಅನ್ನು ಸಹ ಪಡೆಯುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C33 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಸೆಪ್ಟೆಂಬರ್ 6 ಕ್ಕೆ ಬಿಡುಗಡೆಯಾಗಲಿದೆ ಎಂದು ಕಂಪನಿಯು ಪ್ರಕಟಿಸಿದೆ. ಈ ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್‌ ಮತ್ತು 4GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದು 9,500ರೂ ಮತ್ತು 10,500ರೂ ಬೆಲೆಯಲ್ಲಿ ಬರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಸ್ಯಾಂಡಿ ಗೋಲ್ಡ್, ಆಕ್ವಾ ಬ್ಲೂ ಮತ್ತು ನೈಟ್ ಸೀ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ ಎಂದು ಹೇಳಲಾಗುತ್ತದೆ.

Best Mobiles in India

Read more about:
English summary
Realme C33 With 5,000mAh Battery to Launch in India on September 6

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X