Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

ಭಾರತದ ಮಾರುಕಟ್ಟೆಯಲ್ಲಿ ಜನಪ್ರಿಯತೆ ಪಡೆದಿರುವ ಸ್ಮಾರ್ಟ್‌ಫೋನ್‌ ತಯಾರಕರಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದಾಗಿದೆ. ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 7ರಂದು ಭಾರತದಲ್ಲಿ ಲಾಂಚ್‌ ಆಗಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ ಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್ ನಾಚ್‌ ವಿನ್ಯಾಸ ಹೊಂದಿರುವ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಜೊತೆಗೆ ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿದ್ದು, 5,000mAh ಬ್ಯಾಟರಿ ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡುತ್ತದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಪಡೆಯುವ ಸಾಧ್ಯತೆ ಇದೆ. ಇದು 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ರನ್ ಮಾಡುವ ನಿರೀಕ್ಷೆಯಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ 5P ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌,USB ಟೈಪ್-C 2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವ ಬೆಲೆಯಲ್ಲಿ ಬರಲಿದೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಇದನ್ನು ಥೈಲ್ಯಾಂಡ್‌ನಲ್ಲಿ THB 5,799 (ಸುಮಾರು 13,350ರೂ) ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಭಾರತದ ಬೆಲೆಯು ಕೂಡ ಅದೇ ಶ್ರೇಣಿಯಲ್ಲಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯ ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಮಾರ್ಚ್ 7 ರಂದು ಮಧ್ಯಾಹ್ನ 12.30 ಕ್ಕೆ ಬಿಡುಗಡೆಯಾಗಲಿದೆ.

Best Mobiles in India

English summary
Realme C35 India launch date is set for March 7, the Chinese tech giant announced on Friday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+