ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯವಾದ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು 6.6-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. 4GB RAM + 64GB ಹಾಗೂ 4GB + 128GB ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಹಾಗಾದ್ರೆ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಹಾಗೂ 4GB + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ C35 ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ 5P ಲೆನ್ಸ್ ಹೊಂದಿದೆ. ಮ್ಯಾಕ್ರೋ ಕ್ಯಾಮೆರಾ ಮತ್ತು ವೈಟ್-ಬ್ಲಾಕ್ ಪೋರ್ಟ್ರೇಟ್ ಕ್ಯಾಮೆರಾ ಕೂಡ ಇದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.0, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ಬೆಲೆ THB 5,799 (ಅಂದಾಜು 13,350ರೂ.) ಗೆ ನಿಗದಿಪಡಿಸಲಾಗಿದೆ. ಹಾಗೆಯೇ 4GB + 128GB ಇಂಟರ್ ಸ್ಟೋರೇಜ್ ಆಯ್ಕೆಗೆ THB 6,299 (ಅಂದಾಜು 14,500ರೂ.) ಆಗಿದೆ. ಈ ಸ್ಮಾರ್ಟ್‌ಫೋನ್ ಥೈಲ್ಯಾಂಡ್‌ನಲ್ಲಿ ಇ-ಕಾಮರ್ಸ್ ವೆಬ್‌ಸೈಟ್‌ಗಳಾದ Shopee, Lazada ಮತ್ತು JD Central ನಲ್ಲಿ ಕಪ್ಪು ಮತ್ತು ಹಸಿರು ಬಣ್ಣಗಳಲ್ಲಿ ಲಭ್ಯವಿರುತ್ತದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


Click it and Unblock the Notifications








