ಭಾರತದಲ್ಲಿ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಬಿಡುಗಡೆ! ಕ್ಯಾಮೆರಾ ಹೇಗಿದೆ?
ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T616 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ UI R ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಜೊತೆಗೆ f/2.4 ಅಪರ್ಚರ್ ಮತ್ತು ಮೂರನೇ ಕ್ಯಾಮೆರಾ 2 ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C35 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ C35 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 11,999ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ 4GB + 128GB ಮಾದರಿಯ ಆಯ್ಕೆಗೆ 12,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಮಾರ್ಚ್ 12ರ 12pm (ಮಧ್ಯಾಹ್ನ)ರಿಂದ ಖರೀದಿಗೆ ಲಭ್ಯವಿರುತ್ತದೆ. ಇದು ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ದೇಶದ ಇತರೆ ರಿಟೇಲ್ ಸ್ಟೋರ್‌ಗಳ ಮೂಲಕ ಮಾರಾಟವಾಗಲಿದೆ.


Click it and Unblock the Notifications








