ರಿಯಲ್‌ಮಿ C3I ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!

|

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ಹೊಸ ರಿಯಲ್ಮೆ C3I ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಈ ವರ್ಷದ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದ ರಿಯಲ್‌ಮಿ C3 ನ ರಿ ಬ್ರಾಂಡೆಡ್ ಆವೃತ್ತಿಯಾಗಿದೆ. ಇನ್ನು ರಿಯಲ್‌ಮಿ C3I ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್ಮೆ C3I ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 89.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ G70 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌10 ಆಧಾರಿತ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ.ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ C3I ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಚ್‌ಡಿಆರ್, ಎಐ ಬ್ಯೂಟಿಷಿಯನ್‌,ಪನೊರಾಮಿಕ್‌ ಮತ್ತು ಟೈಂ ಲ್ಯಾಪ್ಸ್‌ನಂತಹ ಫೀಚರ್ಸ್‌ಗಳನ್ನ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಬ್ಯಾಟರಿ 43.9 ಗಂಟೆಗಳ ಟಾಕ್ ಟೈಮ್ ಮತ್ತು 727.7 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz ವೈ-ಫೈ, ಯುಎಸ್‌ಬಿ ಒಟಿಜಿ, VOLTE, ಬ್ಲೂಟೂತ್ ವಿ 5.0, ಜಿಪಿಎಸ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ರಿಯಲ್‌ಮಿ C3I 2GB RAM + 32GB ಶೇಖರಣಾ ರೂಪಾಂತರಕ್ಕೆ VND 25,90,000 (ಸುಮಾರು 8,500 ರೂ.) ಬೆಲೆಯನ್ನ ಹೊಂದಿದೆ. ಅಲ್ಲದೆ 4GB RAM + 64GB ಮಾದರಿಯ ಬೆಲೆ ಇನ್ನು ಸ್ಪಷ್ಟವಾಗಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್‌ ವಿಯೆಟ್ನಾಂನಲ್ಲಿ ಬಿಡುಗಡೆ ಆಗಿದ್ದು, ವಿಯೆಟ್ನಾಂ ಇ-ಕಾಮರ್ಸ್‌ ತಾಣಗಳಲ್ಲಿ ವೆಟ್ಟೆಲ್ ಸ್ಟೋರ್ ಮತ್ತು ಗ್ರೀನ್ ಐಸ್ ಬಣ್ಣದ ಆಯ್ಕೆಗಳ ಮೂಲಕ ಫೋನ್ ಖರೀದಿಸಲು ಲಭ್ಯವಿದೆ.

Best Mobiles in India

English summary
Realme C3i has made its debut in Vietnam, and the phone by the looks and specifications appears to be a rebranded version of Realme C3,to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X