ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರಿಯಲ್‌ಮಿ C51 ಸ್ಮಾರ್ಟ್‌ಫೋನ್! ಫೀಚರ್ಸ್ ಹೇಗಿದೆ?
ಭಾರತದಲ್ಲಿ ರಿಯಲ್‌ಮಿ ಕಂಪೆನಿ ಫೋನ್‌ಗಳಿಗೆ ಭಾರಿ ಕ್ರೇಜ್ ಇದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್ ಪರಿಚಯಿಸುತ್ತಾ ಬಂದಿರುವ ರಿಯಲ್‌ಮಿ ಇದೀಗ ಹೊಸ ರಿಯಲ್‌ಮಿ C51 ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದ್ದು, ಇದರ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗಗೊಂಡಿದೆ.
ಹೌದು, ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C51 ಡಿಸ್‌ಪ್ಲೇ ರಚನೆ ವಿನ್ಯಾಸ ನಿರೀಕ್ಷೆ?
ರಿಯಲ್‌ಮಿ C51 ಸ್ಮಾರ್ಟ್‌ಫೋನ್ 6.7 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 270 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ C51 ಪ್ರೊಸೆಸರ್ ಯಾವುದು?
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಯುನಿಸೊಕ್ T612 ಪ್ರೊಸೆಸರ್ ವೇಗವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ ಬಳಕೆದಾರರು RAM ಅನ್ನು ವಾಸ್ತವಿಕವಾಗಿ 4GB ವರೆಗೆ ಹೆಚ್ಚಿಸುವ ಆಯ್ಕೆ ಹೊಂದಿರಲಿದೆ ಎಂದು ಹೇಳಲಾಗಿದೆ.
ರಿಯಲ್‌ಮಿ C51 ಕ್ಯಾಮೆರಾ ಸೆಟ್‌ಅಪ್ ನಿರೀಕ್ಷೆ?
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ರಿಯಲ್‌ಮಿ C51 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರಿಯಲ್‌ಮಿ C51 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ನಿರೀಕ್ಷಿಸಲಾಗಿದೆ. ಇದಲ್ಲದೆ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.
ರಿಯಲ್‌ಮಿ C51 ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವ ಬೆಲೆಯಲ್ಲಿ ಬರಲಿದೆ ಎಂದು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಸ್ಮಾರ್ಟ್‌ಫೋನ್ ಮಿಂಟ್ ಗ್ರೀನ್ ಮತ್ತು ಕಾರ್ಬನ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಫೋನ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ.
ಇನ್ನು ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100-ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.


Click it and Unblock the Notifications








