ಅಗ್ಗದ ಬೆಲೆಯ ಈ ಫೋನ್ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!..ಆಫರ್ ಎಷ್ಟು?
ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಡಿಸ್ಕೌಂಟ್ ಲಭ್ಯ ಆಗಿದೆ. ಅಂದಹಾಗೆ ಈ ಮೊಬೈಲ್ 4 GB RAM + 64 GB ಹಾಗೂ 4 GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ರಿಯಲ್‌ಮಿ C51 ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಶೇ. 27% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಬಹುದಾಗಿದೆ. ಈ ಫೋನಿನ 4 GB RAM + 64 GB ವೇರಿಯಂಟ್‌ನ ಆಫರ್ ಬೆಲೆಯು 7,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಫೋನ್ UNISOC T612 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯವನ್ನು ಒಳಗೊಂಡಿದೆ.

ಇನ್ನು ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಆಗಿದೆ. ಆಸಕ್ತ ಗ್ರಾಹಕರು ಈ ಮೊಬೈಲ್ ಅನ್ನು ಫ್ಲಿಪ್‌ಕಾರ್ಟ್ ತಾಣದ ಮೂಲಕ ಖರೀದಿ ಮಾಡಬಹುದಾಗಿದೆ. ಹಾಗಾದರೇ ರಿಯಲ್‌ಮಿ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ C51 ಫೋನ್ ಫೀಚರ್ಸ್
ರಿಯಲ್‌ಮಿ C51 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, ಇದು 90Hz ರಿಫ್ರೆಶ್ ರೇಟ್ ಸಪೋರ್ಟ್ ಜೊತೆಗೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇದಲ್ಲದೆ 560 ನೀಟ್ಸ್ ವರೆಗೆ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ಒದಗಿಸಲಿದೆ.
ರಿಯಲ್‌ಮಿ C51 ಫೋನ್ UNISOC T612 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಆಯ್ಕೆ ಇದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯ. ಅಲ್ಲದೇ 4GB ವರ್ಚುವಲ್ RAM ಸಪೋರ್ಟ್ ಸಹ ಇದೆ.
ರಿಯಲ್‌ಮಿ ಸಂಸ್ಥೆಯು ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಸಾಮರ್ಥ್ಯದ ಒಳಗೊಂಡಿದೆ. ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಸಹ ಪಡೆದುಕೊಂಡಿದೆ. ಕ್ಯಾಮೆರಾಗೆ ಪೂರಕವಾಗಿ LED ಫ್ಲ್ಯಾಷ್ ಅನ್ನು ಸಹ ನೀಡಲಾಗಿದೆ.
ರಿಯಲ್‌ಮಿ C51 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಇವೆ.
ಭಾರತದಲ್ಲಿ ರಿಯಲ್‌ಮಿ C51 ಫೋನ್ 4GB + 64GB ಹಾಗೂ 4 GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಈ ಫೋನ್ ಅನ್ನು ಗ್ರಾಹಕರು ಮಿಂಟ್ ಗ್ರೀನ್ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications








