Home
ಸುದ್ದಿಜಾಲ

Realme: ರಿಯಲ್‌ಮಿಯ ಈ ಬಜೆಟ್‌ ಬೆಲೆಯ ಫೋನ್‌ ಬೆಲೆ ಇಳಿಕೆ! 2 TB ವರೆಗೂ ಸ್ಟೋರೇಜ್‌ ವಿಸ್ತರಣೆ ಸೌಲಭ್ಯ

ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು (Realme smartphone) ಮಾರುಕಟ್ಟೆಯಲ್ಲಿ ಭರ್ಜರಿ ಸೌಂಡ್ ಮಡುತ್ತವೆ ಅನ್ನೋದು ನಿಮ್ಮೆಲ್ಲರಿಗೂ ತಿಳಿದ ವಿಚಾರ. ಅದರಂತೆ ಸಾಕಷ್ಟು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಲಾಗಿದ್ದು, ಈ ಫೋನ್‌ಗಳು ಬಳಕೆದಾರರಿಗೆ ಭಿನ್ನ ಅನುಭವ ನೀಡುತ್ತಿವೆ. ಈ ಬೆಳವಣಿಗೆ ನಡುವೆ 4 GB RAM ಆಯ್ಕೆಯ ಬಜೆಟ್‌ ಬೆಲೆಯ ಫೋನ್‌ಗೆ ಆಫರ್ ನೀಡಲಾಗಿದೆ.

ಹೌದು, ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ (Realme C51 smartphone) ಇದೀಗ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 2 TB ವರೆಗೂ ಸ್ಟೋರೇಜ್‌ ವಿಸ್ತರಣೆ ಮಾಡಬಹುದಾದ ಆಯ್ಕೆ ಪಡೆದಿದ್ದು, ಇದರೊಂದಿಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದಿದೆ. ಈ ಮೂಲಕ ಉತ್ತಮ ಬಜೆಟ್‌ ಫೋನ್‌ ಎನಿಸಿಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರ ಇಲ್ಲಿದೆ ನೋಡಿ.

ರಿಯಲ್‌ಮಿಯ ಈ ಬಜೆಟ್‌ ಬೆಲೆಯ ಫೋನ್‌ ಬೆಲೆ ಇಳಿಕೆ!

ರಿಯಲ್‌ಮಿ C51 ಸ್ಮಾರ್ಟ್‌ಫೋನ್‌: ಈ ಸ್ಮಾರ್ಟ್‌ಫೋನ್‌ 10,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, 8,999 ರೂ.ಗಳ ಆಫ್‌ ಬೆಲೆಗೆ ನೀವೀಗ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಪ್ರಮುಖ ಇ-ಕಾಮರ್ಸ್‌ ಸೈಟ್‌ ಆಗಿರುವ ಫ್ಲಿಪ್‌ಕಾರ್ಟ್‌ (Flipkart) ಈ ಫೋನ್‌ ಮೇಲೆ 20% ಆಫರ್ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಆಫರ್ ಬಳಕೆ ಮಾಡಿಕೊಳ್ಳುವ ಮೂಲಕ ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ನಿಮ್ಮದಾಗಿಸಿಕೊಳ್ಳಬಹುದು.

ಈ ಫೋನ್‌ ಖರೀದಿ ವೇಳೆ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ ಬಳಕೆ ಮಾಡಿದ್ರೆ 5% ಕ್ಯಾಶ್‌ಬ್ಯಾಕ್ ಸಿಗಲಿದ್ದು, ಈ ಫೋನ್‌ ಖರೀದಿ ಮಾಡಿದ ನಂತರ ಎಸಿ ಖರೀದಿ ಮಾಡಲು ಮುಂದಾದರೆ ಅದರಲ್ಲೂ ರಿಯಾಯಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ತಿಂಗಳಿಗೆ 317ರೂ.ಗಳ ಇಎಮ್‌ಐ ಆಯ್ಕೆ ಸಹ ಇದ್ದು, ಪರಿಣಾಮ ಹಣ ಇಲ್ಲದವರು ಈ ಮೂಲಕ ಸುಲಭವಾಗಿ ಈ ಫೋನ್‌ ಅನ್ನು ಖರೀದಿ ಮಾಡಬಹುದಾಗಿದೆ.

ರಿಯಲ್‌ಮಿಯ ಈ ಬಜೆಟ್‌ ಬೆಲೆಯ ಫೋನ್‌ ಬೆಲೆ ಇಳಿಕೆ!

ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.74 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್‌ ರೇಟ್‌ ಆಯ್ಕೆ ಹಾಗೂ 560 ನಿಟ್ಸ್‌ಗಳ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಮೂಲಕ ಉತ್ತಮವಾದ ವೀಕ್ಷಣೆ ಅನುಭವ ನೀಡಲಿದೆ. ಅಲ್ಲದೆ 20:9 ಅನುಪಾತದೊಂದಿಗೆ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಈ ಫೋನ್‌ನಲ್ಲಿ ಕಾಣಬಹುದು.

ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಯುನಿಸಾಕ್ ಟೈಗರ್ T612 (12 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13, ರಿಯಲ್‌ಮಿ ಯುಐ ಟಿ ಓಎಸ್‌ ಅನ್ನು ರನ್‌ ಮಾಡಲಿದೆ. ಜೊತೆಗೆ ಮಾಲಿ-G57 ಗ್ರಾಫಿಕ್ಸ್‌ ಕಾರ್ಡ್‌ ಬೆಂಬಲ ಪಡೆದಿದ್ದು, ಈ ಬೆಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಫೋನ್‌ ಆಗಿ ಗುರುತಿಸಿಕೊಂಡಿದೆ. ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆ ಹಾಗೂ 4GB RAM ಸ್ಟೋರೇಜ್‌ ಬೆಂಬಲದೊಂದಿಗೆ 2 TB ವರೆಗೂ ಸ್ಟೋರೇಜ್‌ ವಿಸ್ತರಣೆ ಸೌಲಭ್ಯವನ್ನು ಈ ಫೋನ್‌ ಪಡೆದಿದೆ.

ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದಿದ್ದು, ಇದರೊಂದಿಗೆ 0.08 MP, f/3.0 ,(ಆಕ್ಸಿಲಿಯರಿ ಲೆನ್ಸ್) ಆಯ್ಕೆಯನ್ನೂ ಪಡೆದಿದೆ. ಈ ಸೆನ್ಸರ್‌ಗಳು ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಅನ್ನು ಪಡೆದಿದ್ದು, ಈ ಮೂಲಕ ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ಅನುಕೂಲ ಮಾಡಿಕೊಡಲಿವೆ. ಜೊತೆಗೆ 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದು.

ರಿಯಲ್‌ಮಿಯ ಈ ಬಜೆಟ್‌ ಬೆಲೆಯ ಫೋನ್‌ ಬೆಲೆ ಇಳಿಕೆ!

ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಅಂದರೆ 28 ನಿಮಿಷಗಳಲ್ಲಿ 0-50% ಚಾರ್ಜಿಂಗ್ ಆಗಲಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯವನ್ನು ಪಡೆದಿದೆ.

Best Mobiles in India

English summary
Realme C51 smartphone has now appeared at an offer price. The smartphone has an expandable storage option of up to 2 TB, along with a 50 megapixel main camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+