Home
ಸುದ್ದಿಜಾಲ

ಟೆಕ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ C51 ಅನಾವರಣ! ಭಾರತದಲ್ಲಿ ಯಾವಾಗ?

ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್‌ ತೈವಾನ್‌ನಲ್ಲಿ ಲಾಂಚ್‌ ಆಗಿದೆ.

ಹೌದು, ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡುವ ಮುನ್ನವೇ ತೈವಾನ್‌ನಲ್ಲಿ ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 33W ಸೂಪರ್‌ವೋಕ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ C51 ಅನಾವರಣ! ಭಾರತದಲ್ಲಿ ಯಾವಾಗ?

ರಿಯಲ್‌ಮಿ C51 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 560 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ರಿಯಲ್‌ಮಿ C51 ಪ್ರೊಸೆಸರ್‌ ಯಾವುದು?
ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Unisoc T612 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 4GB ಬಳಕೆಯಾಗದ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಲು ಅನುಮತಿಸಲಿದೆ.

ರಿಯಲ್‌ಮಿ C51 ಕ್ಯಾಮೆರಾ ಸೆಟ್‌ಅಪ್‌
ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ ವಿವರಗಳು ಇನ್ನು ಬಹಿರಂಗವಾಗಿಲ್ಲ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರಿಯಲ್‌ಮಿ C51 ಬ್ಯಾಟರಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಡ್ಯುಯಲ್ ಸಿಮ್ ಬೆಂಬಲವನ್ನು ಒಳಗೊಂಡಿವೆ.

ರಿಯಲ್‌ಮಿ C51 ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ತನ್ನ ಏಕೈಕ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ TWD 3,990 (ಅಂದಾಜು 10,400ರೂ)ಬೆಲೆಗೆ ನಿಗದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಾರ್ಬನ್ ಬ್ಲಾಕ್ ಮತ್ತು ಮಿಂಟ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗುವ ನಿರೀಕ್ಷೆಯನ್ನು ಇಡಲಾಗಿದೆ.

ಇನ್ನು ಇತ್ತೀಚಿಗೆ ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ C53 ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್‌ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೇಸ್ ಮಾಡೆಲ್‌ 9,999ರೂ. ಬೆಲೆಯನ್ನು ಹೊಂದಿದೆ.

Best Mobiles in India

English summary
Realme C51 Tipped to Launch in India Soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+