ಭಾರತಕ್ಕೆ ಎಂಟ್ರಿ ಕೊಟ್ಟ ರಿಯಲ್‌ಮಿ C51.. ಬಜೆಟ್ ಬೆಲೆಯಲ್ಲಿ ಬಿಗ್ ಬ್ಯಾಟರಿ ಬ್ಯಾಕ್‌ಅಪ್!
ಜಾಗತಿಕ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿದ್ದ ರಿಯಲ್‌ಮಿ C51 ಇದೀಗ ಭಾರತಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿದೆ. ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ. ಇದು UNISOC T612 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 2TB ಸಂಗ್ರಹ ಸಾಮರ್ಥ್ಯದ ಮೆಮೊರಿ ಕಾರ್ಡ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C51 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ C51 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲವನ್ನು ಒಳಗೊಂಡಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇದಲ್ಲದೆ 560 ನೀಟ್ಸ್ ವರೆಗೆ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ನೀಡಲಿದೆ. ಜೊತೆಗೆ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ದೃಷ್ಟಿಗೆ ಆಹ್ಲಾದಕರ ಅನುಭವವನ್ನು ಖಾತ್ರಿಗೊಳಿಸುತ್ತದೆ.
ರಿಯಲ್‌ಮಿ C51 ಪ್ರೊಸೆಸರ್ ಯಾವುದು?
ರಿಯಲ್‌ಮಿ C51 ಸ್ಮಾರ್ಟ್‌ಫೋನ್ UNISOC T612 ಚಿಪ್‌ಸೆಟ್ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ. ಇನ್ನು ಸ್ಮಾರ್ಟ್‌ಫೋನ್ 4GB ವರ್ಚುವಲ್ RAM ಬೆಂಬಲಿಸಲಿದೆ.
ರಿಯಲ್‌ಮಿ C51 ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಸಹ ಜೋಡಿಸಲಾಗಿದೆ.
ರಿಯಲ್‌ಮಿ C51 ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C51 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಕೇವಲ 7.99mm ದಪ್ಪದಲ್ಲಿ ಸ್ಲಿಮ್ ಪ್ರೊಫೈಲ್ ಅನ್ನು ನಿರ್ವಹಿಸುತ್ತದೆ.
ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB + 64GB ಸ್ಟೋರೇಜ್ ಆಯ್ಕೆಗೆ 8,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಅನ್ನು ಮಿಂಟ್ ಗ್ರೀನ್ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ. ಇದು ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್ ಹಾಗೂ ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.
ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ವರ್ಚುವಲ್ RAM ವಿಸ್ತರಣೆಯನ್ನು 16GB ವರೆಗೆ ಬೆಂಬಲಿಸುತ್ತದೆ ಎಂದು ರಿಯಲ್‌ಮಿ ಕಂಪೆನಿ ಹೇಳಿದೆ.


Click it and Unblock the Notifications








