ಈ ಫೋನಿಗೆ ಬಿಗ್ ಡಿಸ್ಕೌಂಟ್!..108ಎಂಪಿ ಕ್ಯಾಮೆರಾ ಇದ್ರೂ, ಸಸ್ತಾ ಬೆಲೆಗೆ ಲಭ್ಯ!
ದೈತ್ಯ ಇ ಕಾಮರ್ಸ್ ತಾಣ ಎನಿಸಿರುವ ಫ್ಲಿಪ್‌ಕಾರ್ಟ್ ಸದ್ಯ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ರಿಯಲ್‌ಮಿ ಸಂಸ್ಥೆಯ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್ ನೀಡಿದೆ. ಆ ಪೈಕಿ ರಿಯಲ್‌ಮಿ C53 ಮೊಬೈಲ್ ಸ್ಮಾರ್ಟ್‌ಫೋನ್ ಬಿಗ್ ಬಿಲಿಯನ್ ಡೇಸ್ ಸೇಲ್ ಮಾರಾಟ ಮೇಳದಲ್ಲಿ ಬಿಗ್ ರಿಯಾಯಿತಿ ಪಡೆದುಕೊಂಡಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ರಿಯಲ್‌ಮಿ C53 ಮೊಬೈಲ್ ಶೇ. 16% ರಷ್ಟು ನೇರ ರಿಯಾಯಿತಿ ಹೊಂದಿದ್ದು, 4 GB RAM + 128 GB ವೇರಿಯಂಟ್ ಫೋನ್ 9,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಕೆಲವು ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಆಫರ್ ಸಹ ದೊರೆಯುತ್ತವೆ. ಹೀಗಾಗಿ ಮತ್ತಷ್ಟು ಡಿಸ್ಕೌಂಟ್ ದರದಲ್ಲಿ ಮೊಬೈಲ್ ಖರೀದಿ ಮಾಡಬಹುದು.

ಈ ಮೊಬೈಲ್ ಯುನಿಸೋಕ್ T612 SoC ಪ್ರೊಸೆಸರ್ ಪಡೆದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಆಗಿದೆ. ಇನ್ನುಳಿದಂತೆ ರಿಯಲ್‌ಮಿ C53 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ಡಿಸೈನ್ ಮಾಹಿತಿ
ರಿಯಲ್‌ಮಿ ಈ ಫೋನ್ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿರುವ ಜೊತೆಗೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಡಿಸ್‌ಪ್ಲೇ 90.3% ಸ್ಕ್ರೀನ್-ಟು-ಬಾಡಿ ಅನುಪಾತ ಇದ್ದು, 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಪೋರ್ಟ್ ಇದೆ.
ಪವರ್‌ಫುಲ್ ಪ್ರೊಸೆಸರ್ ಕಾರ್ಯವೈಖರಿ
ರಿಯಲ್‌ಮಿ C53 ಮೊಬೈಲ್ ಯುನಿಸೋಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯ ಮಾಡುತ್ತದೆ. ಇದು ಆಂಡ್ರಾಯ್ಡ್ 13 ಓಎಸ್ ಆಧಾರಿತ ಸಪೋರ್ಟ್ ಹೊಂದಿದೆ. ಇನ್ನು ಈ ಫೋನ್ 4GB RAM + 128GB ಹಾಗೂ 6GB RAM + 64GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಪಡೆದಿದೆ. ಹಾಗೆಯೇ ರಿಯಲ್‌ಮಿ C53 ಫೋನ್ RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದಾಗಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ರಿಯಲ್‌ಮಿ C53 ಫೋನ್ ಡ್ಯುಯಲ್ ರಿಯರ್ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾಗಳಿಗಾಗಿ ಹಿಂಭಾಗದಲ್ಲಿ ಮೂರು ಪ್ರತ್ಯೇಕ ರೌಂಡ್ ಲೈಟ್‌ಗಳ ಮತ್ತು ಎಲ್ಇಡಿ ಫ್ಲ್ಯಾಷ್‌ಲೈಟ್ ಅನ್ನು ಸೌಲಭ್ಯ ಪಡೆದುಕೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ
ರಿಯಲ್‌ಮಿ C53 ಮೊಬೈಲ್ 5,000 mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಇದ್ದು, ಇದಕ್ಕೆ ಅನುಗುಣವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲ ಮಾಡಲಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, GPS/AGPS, Wi-Fi, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಆಯ್ಕೆ ಕಾಣಬಹುದಾಗಿದೆ.
ಮೆಮೊರಿ ಮತ್ತು ಕಲರ್ ಮಾಹಿತಿ
ಭಾರತದಲ್ಲಿ ರಿಯಲ್‌ಮಿ C53 ಮೊಬೈಲ್ 4GB RAM + 128GB ಮತ್ತು 6GB RAM + 64GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಮೊಬೈಲ್ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications








