Home
ಸುದ್ದಿಜಾಲ

ಇಂದು ರಿಯಲ್‌ಮಿ C53 ಫಸ್ಟ್‌ ಸೇಲ್‌!..ಅಗ್ಗದ ಬೆಲೆ; 108ಎಂಪಿ ಕ್ಯಾಮೆರಾ!

ರಿಯಲ್‌ಮಿ ಮೊಬೈಲ್ ಕಂಪನಿಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಬಜೆಟ್‌ ಲೆವೆಲ್‌ ಮಾದರಿಯಲ್ಲಿ ಗ್ರಾಹಕರನ್ನು ಸೆಳೆದಿದೆ. ಈ ಮೊಬೈಲ್‌ ಇಂದು (ಜು. 26 ರಂದು) ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 4GB RAM + 128GB ಸ್ಟೋರೇಜ್‌ನ ಆರಂಭಿಕ ಬೆಲೆಯು 9,999ರೂ. ಆಗಿದೆ.

ಹೌದು, ರಿಯಲ್‌ಮಿ C53 ಫೋನ್‌ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್‌ ಯುನಿಸೋಕ್‌ T612 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ.

ಇಂದು ರಿಯಲ್‌ಮಿ C53 ಫಸ್ಟ್‌ ಸೇಲ್‌!..ಅಗ್ಗದ ಬೆಲೆ; 108ಎಂಪಿ ಕ್ಯಾಮೆರಾ!

ಹಾಗೆಯೇ ರಿಯಲ್‌ಮಿ C53 ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಂದಹಾಗೆ ಈ ಮೊಬೈಲ್‌ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ರಿಯಲ್‌ಮಿ C53 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ C53 ಡಿಸ್‌ಪ್ಲೇ ರಚನೆ ಮಾಹಿತಿ : ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ C53 ಪ್ರೊಸೆಸರ್‌ ಪವರ್‌ ಯಾವುದು : ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ರಿಯಲ್‌ಮಿ UI T ಆವೃತ್ತಿಯನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ 4GB RAM + 128GB ಮತ್ತು 6GB RAM + 64GB ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದಾಗಿದೆ. ಹಾಗೆಯೇ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 2TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರಿಯಲ್‌ಮಿ C53 ಕ್ಯಾಮೆರಾ ರಚನೆಯ ಮಾಹಿತಿ : ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾಗಳಿಗಾಗಿ ಹಿಂಭಾಗದಲ್ಲಿ ಮೂರು ಪ್ರತ್ಯೇಕ ವೃತ್ತಾಕಾರದ ದ್ವೀಪಗಳು ಮತ್ತು ಎಲ್ಇಡಿ ಫ್ಲ್ಯಾಷ್‌ಲೈಟ್ ಅನ್ನು ಹೊಂದಿದೆ.

ರಿಯಲ್‌ಮಿ C53 ಬ್ಯಾಟರಿ ಮತ್ತು ಇತರೆ ಆಯ್ಕೆಗಳು : ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯ ಬ್ಯಾಟರಿಯನ್ನು ಪಡೆದುಕೊಂದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, GPS/AGPS, Wi-Fi, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಅಕ್ಸಿಲೆರೊಮೀಟರ್, ಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸಾರ್, ಗೈರೊ ಮೀಟರ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೌಲಭ್ಯಗಳನ್ನು ಪಡೆದಿದೆ.

ರಿಯಲ್‌ಮಿ C53 ಮೆಮೊರಿ ಮತ್ತು ಲಭ್ಯತೆ ಮಾಹಿತಿ : ರಿಯಲ್‌ಮಿ C53 ಮೊಬೈಲ್‌ ಭಾರತದಲ್ಲಿ ತನ್ನ ಆರಂಭಿಕ ಮಾಡೆಲ್‌ 4GB RAM + 128GB ಸ್ಟೋರೇಜ್ ಆಯ್ಕೆಗೆ 9,999ರೂ.ಬೆಲೆಯನ್ನು ಹೊಂದಿದೆ. ಅದೇ ರೀತಿ 6GB RAM + 64GB ಸ್ಟೋರೇಜ್ ಆಯ್ಕೆಗೆ 10,999ರೂ. ಬೆಲೆಯನ್ನು ಹೊಂದಿದೆ. ಇನ್ನು ಫೋನ್‌ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಗ್ರಾಹಕರು ರಿಯಲ್‌ಮಿ.ಕಾಮ್‌ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಸಬಹುದು.

Best Mobiles in India

English summary
Realme C53 first sale today via Flipkart and realme website. price and specifications details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+