ರಿಯಲ್‌ಮಿಯ ಈ ಫೋನಿನ ಡಿಸ್ಕೌಂಟ್ ಬೆಲೆ ತಿಳಿದ್ರೆ, ವಾವ್ ಎನ್ನಲೇಬೇಕು!
ರಿಯಲ್‌ಮಿ ಮೊಬೈಲ್ ಬ್ರ್ಯಾಂಡ್ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ರೇಂಜ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಜೆಟ್ ದರದಲ್ಲಿ ಗಮನ ಸೆಳೆದ ಫೋನ್‌ಗಳಲ್ಲಿ ರಿಯಲ್‌ಮಿ C53 ಫೋನ್ ಕೂಡಾ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಇದೀಗ ಸಖತ್ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ತಿರುಗಿ ನೋಡುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ರಿಯಲ್‌ಮಿ C53 ಮೊಬೈಲ್ ಶೇ. 16% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದ್ದು, 4 GB RAM + 128 GB ವೇರಿಯಂಟ್ (ಚಾಂಪಿಯನ್ ಬ್ಲ್ಯಾಕ್ ಕಲರ್) ಫೋನ್ 9,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಕೆಲವು ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಆಫರ್ ಸಹ ದೊರೆಯುತ್ತವೆ.

ರಿಯಲ್‌ಮಿ C53 ಮೊಬೈಲ್ ಯುನಿಸೋಕ್ T612 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ನಲ್ಲಿ ಇದೆ. ಹಾಗಾದರೇ ರಿಯಲ್‌ಮಿ C53 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಹಾಗೂ ಡಿಸೈನ್ ಮಾಹಿತಿ
ರಿಯಲ್‌ಮಿ ಈ ಮೊಬೈಲ್ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಫೋನಿನ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿರುವ ಜೊತೆಗೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಡಿಸ್‌ಪ್ಲೇ 90.3% ಸ್ಕ್ರೀನ್-ಟು-ಬಾಡಿ ಅನುಪಾತ ಇದ್ದು, 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲ ಇದೆ.

ವೇಗದ ಪ್ರೊಸೆಸರ್ ಸೌಲಭ್ಯ
ರಿಯಲ್‌ಮಿ C53 ಮೊಬೈಲ್ ಯುನಿಸೋಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಇದು ಆಂಡ್ರಾಯ್ಡ್ 13 ಓಎಸ್ ಆಧಾರಿತ ಸಪೋರ್ಟ್ ಹೊಂದಿದೆ. ಇನ್ನು ಈ ಫೋನ್ 4GB RAM + 128 GB ಹಾಗೂ 6GB RAM + 64 GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಪಡೆದಿದೆ.
ಇನ್ನು ರಿಯಲ್‌ಮಿ C53 ಫೋನ್ RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದಾಗಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ರಿಯಲ್‌ಮಿ C53 ಮೊಬೈಲ್ ಡ್ಯುಯಲ್ ರಿಯರ್ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ. ಹಾಗೆಯೇ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಕ್ಯಾಮೆರಾಗಳಿಗಾಗಿ ಹಿಂಭಾಗದಲ್ಲಿ ಮೂರು ಪ್ರತ್ಯೇಕ ರೌಂಡ್ ಲೈಟ್‌ಗಳ ಮತ್ತು ಎಲ್ಇಡಿ ಫ್ಲ್ಯಾಷ್‌ಲೈಟ್ ಅನ್ನು ಸೌಲಭ್ಯ ನೀಡಲಾಗಿದೆ.
ಬ್ಯಾಟರಿ ಹಾಗೂ ಇತರೆ ಆಯ್ಕೆಗಳು
ರಿಯಲ್‌ಮಿ C53 ಫೋನ್ 5,000 mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, GPS/AGPS, Wi-Fi, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಆಯ್ಕೆ ಲಭ್ಯ..
ಕಲರ್ ಆಯ್ಕೆ ಮಾಹಿತಿ
ರಿಯಲ್‌ಮಿ C53 ಮೊಬೈಲ್ 4GB RAM + 128GB ಹಾಗೂ 6GB RAM + 64GB ಆಂತರೀಕ ಸ್ಟೋರೇಜ್ ಸೌಲಭ್ಯ ಒಳಗೊಂಡಿದೆ. ಇನ್ನು ಮೊಬೈಲ್ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.


Click it and Unblock the Notifications








