Realme:ಬಹು ನಿರೀಕ್ಷಿತ ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ! ಹೇಗಿರಲಿದೆ ಡಿಸೈನ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C53 (realme c53) ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈಗಾಗಲೇ C ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವುದರಿಂದ ಈ ಫೋನ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇದೀಗ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.
ಹೌದು, ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಮಿನಿ ಕ್ಯಾಪ್ಸುಲ್‌ನೊಂದಿಗತೆ ಬರುವುದು ಪಕ್ಕಾ ಆಗಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C53 ಫೀಚರ್ಸ್ ನಿರೀಕ್ಷೆ ಏನು: ರಿಯಲ್‌ಮಿ C53 ಸ್ಮಾರ್ಟ್‌ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 180Hz ಟಚ್ ಸ್ಯಾಪ್ಲಿಂಗ್ ರೇಟ್ ಮತ್ತು 650 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ C53 ಪ್ರೊಸೆಸರ್ ಯಾವುದು: ಈ ಸ್ಮಾರ್ಟ್‌ಫೋನ್ ಅನಿರ್ದಿಷ್ಟ ಆಕ್ಟಾ ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ARM Mali-G57 GPU ಸಪೋರ್ಟ್ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಆಂಡ್ರಾಯ್ಡ್ 13 ಬೆಂಬಲಿಸಲಿದೆ ಎನ್ನಲಾಗಿದೆ. ಹಾಗೆಯೇ 6GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ.

ರಿಯಲ್‌ಮಿ C53 ಕ್ಯಾಮೆರಾ ಸೆಟ್‌ಅಪ್: ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಪ್ಯಾನೆಲ್ ಅನ್ನು ಒಳಗೊಂಡಿರಬಹುದು. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿರುಯತ್ತದೆ. ಇದನ್ನು ಸ್ಮಾರ್ಟ್‌ಫೋನ್ ಮುಂಭಾಗದ ವಾಟರ್‌ಡ್ರಾಪ್ ನಾಚ್‌ನಲ್ಲಿ ಕಂಡುಬರುತ್ತದೆ.
ರಿಯಲ್‌ಮಿ C53 ಬ್ಯಾಟರಿ ಬ್ಯಾಕ್‌ಅಪ್: ರಿಯಲ್‌ಮಿ C53 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ GPS, NFC, WiFi, ಮತ್ತು ಬ್ಲೂಟೂತ್ v5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ನೀಡಲಾಗುತ್ತದೆ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಇದೇ ತಿಂಗಳು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಏಕೈಕ 6GB + 256GB ಕಾನ್ಫಿಗರೇಶನ್‌ನಲ್ಲಿ ನೀಡಲಾಗುತ್ತದೆ ಎನ್ನಲಾಗಿದೆ. ಸದ್ಯ ಇದರ ಬೆಲೆ ಹಾಗೂ ಲಭ್ಯತೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಚಾಂಪಿಯನ್ ಗೋಲ್ಡ್ ಮತ್ತು ಮೈಟಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
ಇನ್ನು ಇತ್ತೀಚಿಗೆ ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಜೊತೆಗೆ 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








