Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ C53 ಎಂಟ್ರಿಗೆ ಮುಹೂರ್ತ ಫಿಕ್ಸ್‌! 108 MP ಕ್ಯಾಮೆರಾ ನಿರೀಕ್ಷೆ?

ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ವಿನ್ಯಾಸ ಹಾಗೂ ಸ್ಟೈಲಿಶ್‌ ಲುಕ್‌ ಸ್ಮಾರ್ಟ್‌ಫೋನ್‌ಗಳಿಗೆ ರಿಯಲ್‌ಮಿ ಕಂಪೆನಿ ಹೆಸರುವಾಸಿಯಾಗಿದೆ. ಇದೀಗ ತನ್ನ ಮುಂಬರುವ ಹೊಸ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಜುಲೈ 19 ರಂದು ಬಿಡುಗಡೆ ಆಗೋದು ಕನ್ಫರ್ಮ್‌ ಆಗಿದೆ.

ಹೌದು, ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಇದೇ ಜುಲೈ 19 ರಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಅನಿರ್ದಿಷ್ಟ ಆಕ್ಟಾ-ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ಜೊತೆಗೆ 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ರಿಯಲ್‌ಮಿ C53 ಎಂಟ್ರಿಗೆ ಮುಹೂರ್ತ ಫಿಕ್ಸ್‌! 108MP ಕ್ಯಾಮೆರಾ !

ರಿಯಲ್‌ಮಿ C53 ಡಿಸ್‌ಪ್ಲೇ ರಚನೆ ನಿರೀಕ್ಷೆ?
ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ನ ರಿಫ್ರೆಶ್ ರೇಟ್‌ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಡಿಸ್‌ಪ್ಲೇ 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಒಳಗೊಂಡಿದೆ. ಇದರೊಂದಿಗೆ ಈ ಡಿಸ್‌ಪ್ಲೇ 650 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ.

ರಿಯಲ್‌ಮಿ C53 ಪ್ರೊಸೆಸರ್‌ ಯಾವುದು?
ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ARM Mali-G57 GPU ಸಪೋರ್ಟ್‌ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ಸ್ಟೋರೇಜ್‌ ಅನ್ನು ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರಿಯಲ್‌ಮಿ C53 ಕ್ಯಾಮೆರಾ ಸೆಟ್‌ಅಪ್‌
ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ರಿಯಲ್‌ಮಿ C53 ಬ್ಯಾಟರಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, 3.5 ಎಂಎಂ ಆಡಿಯೊ ಜ್ಯಾಕ್ ಬೆಂಬಲದೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇದು GPS, NFC, WiFi, USB Type-C ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದು ಚಾಂಪಿಯನ್ ಗೋಲ್ಡ್ ಮತ್ತು ಮೈಟಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ C53 ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಇದೇ ಜುಲೈ 19 ರಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಇದು ಬಜೆಟ್‌ ಬೆಲೆಯಲ್ಲಿ ಬರುವ ನಿರೀಕ್ಷೆಯನ್ನು ಇಡಲಾಗಿದೆ.

ಇನ್ನು ಇತ್ತೀಚಿಗೆ ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸರಣಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Best Mobiles in India

English summary
Realme C53 with 5000mAh battery to launch in India on July 19
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+