ಇಂದು ರಿಯಲ್‌ಮಿ C63 ಸ್ಮಾರ್ಟ್‌ಫೋನ್ ಫಸ್ಟ್ ಸೇಲ್; ಏನಾದ್ರೂ ಆಫರ್ ಇದೆಯಾ?
ರಿಯಲ್‌ಮಿ ಮೊಬೈಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ ಪರಿಚಯಿಸಿರುವ ರಿಯಲ್‌ಮಿ C63 (Realme C63) ಫೋನ್ ಅಗ್ಗದ ಬೆಲೆಯ ಹಾಗೂ ಡಿಸೈನ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್‌ನ ಫಸ್ಟ್ ಸೇಲ್ ಇಂದು ( ಜುಲೈ 3 ರಂದು ) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಪ್ರಾರಂಭ ಆಗಲಿದೆ. ಅಂದಹಾಗೆ ರಿಯಲ್‌ಮಿ C63 ಮೊಬೈಲ್‌ನ ಆರಂಭಿಕ ವೇರಿಯಂಟ್ ಬೆಲೆಯು 8,999 ರೂ. ಗಳು ಆಗಿದ್ದು, ಕೆಲವು ಆಫರ್ ಸಹ ಲಭ್ಯ ಆಗಲಿವೆ.
ಹೌದು, ರಿಯಲ್‌ಮಿ ಕಂಪನಿಯ ರಿಯಲ್‌ಮಿ C63 (Realme C63) ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಇಂದು ಅಧಿಕೃತವಾಗಿ ಮಾರಾಟ ಪ್ರಾರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Unisoc T612 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ.

ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಜೇಡ್ ಗ್ರೀನ್ ಮತ್ತು ಲೆದರ್ ಬ್ಲೂ ಆಯ್ಕೆಯಲ್ಲಿ ಈ ಫೋನ್ ಖರೀದಿಗೆ ಲಭ್ಯ ಆಗಲಿದೆ. ಇನ್ನುಳಿದಂತೆ ರಿಯಲ್‌ಮಿ C63 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ರಿಯಲ್‌ಮಿ C63 ಫೋನಿನ - ಫೀಚರ್ಸ್
ರಿಯಲ್‌ಮಿ C63 ಮೊಬೈಲ್ 6.74 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್ ಸಹ ಪಡೆದಿದೆ. ಹಾಗೆಯೇ ಅತ್ಯುತ್ತಮ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ವಾಟರ್ ಡ್ರಾಪ್ ಕಟೌಟ್ ಪಡೆದುಕೊಂಡಿದೆ.
ರಿಯಲ್‌ಮಿ C63 ಫೋನ್ ಆಕ್ಟಾ-ಕೋರ್ Unisoc T612 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇದೆ. ಇದರೊಂದಿಗೆ 4GB + 128GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಈ ಫೋನ್ ಪಡೆದಿದೆ.
ರಿಯಲ್‌ಮಿ C63 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಪಡೆದುಕೊಂಡಿದೆ.
ರಿಯಲ್‌ಮಿ C63 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 45W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದೆ. ಹಾಗೆಯೇ ರಿಯಲ್‌ಮಿ C63 ಫೋನ್ 5G ವೈ-ಫೈ ಮತ್ತು ಬ್ಲೂಟೂತ್ ಸೌಲಭ್ಯ ಪಡೆದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಏರ್ ಗೆಸ್ಚರ್‌ಗಳಂತಹ AI ಬೆಂಬಲಿತ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ.
ಅಂದಹಾಗೆ ರಿಯಲ್‌ಮಿ C63 ಫೋನ್ ಜುಲೈ 3 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮೊದಲ ಮಾರಾಟ ಶುರು ಮಾಡಲಿದೆ. ಇನ್ನು ಈ ಫೋನ್ ಜೇಡ್ ಗ್ರೀನ್ ಮತ್ತು ಲೆದರ್ ಬ್ಲೂ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಈ ಫೋನಿನ ಆರಂಭಿಕ ಬೆಲೆಯು 8,999 ರೂ. ಗಳು ಆಗಿದೆ.


Click it and Unblock the Notifications








