Home
ಸುದ್ದಿಜಾಲ

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರಿಯಲ್‌ಮಿ C65 5G! ಬಜೆಟ್‌ ಬೆಲೆಯಲ್ಲಿ 5G ಫೋನ್‌!

ರಿಯಲ್‌ಮಿ ಕಂಪೆನಿ ಶೀಘ್ರದಲ್ಲೇ ತನ್ನ ಹೊಸ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಈ ಮೂಲಕ ಟೆಕ್‌ ವಲಯದಲ್ಲಿ ಹೊಸ ಅಲೆಯನ್ನು ಸೃಷ್ಟಿಸುವುದಕ್ಕೆ ಮುಂದಾಗಿದೆ. ಸದ್ಯ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಹಾಗೂ ಬೆಲೆ ವಿವರಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.

ಹೌದು, ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ಸನ್ನಿವೇಶದಲ್ಲಿ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ಬೆಂಬಲದೊಂದಿಗೆ ದೇಶದಲ್ಲಿ ಬಿಡುಗಡೆಯಾಗಲಿರುವ ಮೊದಲ ರಿಯಲ್‌ಮಿ C ಸರಣಿಯ ಸ್ಮಾರ್ಟ್‌ಫೋನ್ ಆಗಿದೆ. ಹಾಗಾದ್ರೆ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರಿಯಲ್‌ಮಿ C65 5G! ಬಜೆಟ್‌ ಬೆಲೆಯಲ್ಲಿ 5G ಫೋನ್‌!

ರಿಯಲ್‌ಮಿ C65 5G ಡಿಸ್‌ಪ್ಲೇ ರಚನೆ ಸಾಧ್ಯತೆ
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ 6.72  ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 392 ಪಿಪಿಐ ಪಿಕ್ಸೆಲ್‌ ಸಾಂದ್ರತೆಯಲ್ಲಿ ಬರಲಿದೆ ಎಂದು ಹೇಳಲಾಗಿದೆ. ಜೊತೆಗೆ ಡಿಸ್‌ಪ್ಲೇ 1050 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದರೊಂದಿಗೆ ಡಿಸ್‌ಪ್ಲೇ 96% NTSC, ಸನ್‌ಲೈಟ್ ಸ್ಕ್ರೀನ್ ಬೆಂಬಲವನ್ನು ಸಹ ಹೊಂದಿರಲಿದೆ ಎಂದು ಹೇಳಲಾಗಿದೆ.

ರಿಯಲ್‌ಮಿ C65 5G ಪ್ರೊಸೆಸರ್‌ ನಿರೀಕ್ಷೆ ಏನು?
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 6 GB ವರ್ಚುವಲ್ RAM ಅನ್ನು ಸಹ ಪಡೆದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ ಎನ್ನಲಾಗಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರಿಯಲ್‌ಮಿ C65 5G! ಬಜೆಟ್‌ ಬೆಲೆಯಲ್ಲಿ 5G ಫೋನ್‌!

ರಿಯಲ್‌ಮಿ C65 5G ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರಲಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ರಿಯಲ್‌ಮಿ C65 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುವ ನಿರೀಕ್ಷೆಯಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಬ್ಲೂಟೂತ್ v5.3, ವೈಫೈ, USB-C v2.0 ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಹೊಂದಿರಲಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ರಿಯಲ್‌ಮಿ C65 5G! ಬಜೆಟ್‌ ಬೆಲೆಯಲ್ಲಿ 5G ಫೋನ್‌!

ರಿಯಲ್‌ಮಿ C65 5G ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಡಿಸೆಂಬರ್ ಆರಂಭದಲ್ಲಿ ಅನಾವರಣಗೊಳಿಸುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 12,000ರೂ ಬೆಲೆಯಲ್ಲಿ ಬರಲಿದೆ ಎನ್ನಲಾಗಿದೆ. ಇದು ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ರಿಯಲ್‌ಮಿ ಕಂಪೆನಿಯ 5G ಸ್ಮಾರ್ಟ್‌ಫೋನ್‌ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಕಾರ್ಬನ್ ಬ್ಲಾಕ್ ಮತ್ತು ಮಿಂಟ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಮೂಲಕ ಟೆಕ್‌ ವಲಯದಲ್ಲಿ ಹೊಸ ಅಲೆಯನ್ನು ಸೃಷ್ಟಿಸುವುದಕ್ಕೆ ಮುಂದಾಗಿದೆ.

Best Mobiles in India

English summary
Realme C65 5G Key Specifications Revealed Online; Launch in India Soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+