Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಸ್ಟೈಲಿಶ್‌ 5G ಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಆಫರ್‌ ಗಮನಿಸಿ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಬಹುತೇಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಆಗಿದೆ. ಇದು ಮುಖ್ಯವಾಗಿ ಮೊಬೈಲ್‌ಗಳಿಗೆ ಸ್ಪೆಷಲ್‌ ಡಿಸ್ಕೌಂಟ್‌ ಲಭ್ಯ ಮಾಡುತ್ತದೆ. ಇದೀಗ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ C65 5G ಮೊಬೈಲ್‌ ಕೂಡಾ ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಫೋನಿನತ್ತ ಹಿಂತಿರುಗಿ ನೋಡುವಂತಾಗಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಒಳಗೊಂಡಿದೆ.

ಹೌದು, ಲೀಡಿಂಗ್ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ರಿಯಲ್‌ಮಿ C65 5G (realme C65 5G) ಫೋನ್‌ ಶೇ. 25% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ನ 4 GB + 64 GB ಸ್ಟೋರೇಜ್‌ ವೇರಿಯಂಟ್‌ 10,499ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಸ್ಟೈಲಿಶ್‌ 5G ಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಆಫರ್‌ ಗಮನಿಸಿ!

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಅಲ್ಲದೇ 4GB + 64 GB, 4GB + 128 GB ಹಾಗೂ 6GB + 128 GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನ್‌ ಫೆದರ್‌ ಗ್ರೀನ್‌ ಹಾಗೂ ಗ್ಲೋವಿಂಗ್ ಬ್ಲ್ಯಾಕ್‌ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೇ ರಿಯಲ್‌ಮಿ C65 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಈ ಡಿಸ್‌ಪ್ಲೇಯು 1604×720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದ್ದು, 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಆಯ್ಕೆ ಒಳಗೊಂಡಿದ್ದು, 1500:1 ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 625 nits HBM ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ.

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ 4GB + 64 GB, 4GB + 128 GB ಹಾಗೂ 6GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ರಿಯಲ್‌ಮಿ C65 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆ ಕಾಣಬಹುದಾಗಿದೆ ಜೊತೆಗೆ ಎಲ್‌ಇಡಿ ಫ್ಲ್ಯಾಶ್‌ ಲೈಟ್‌ ಸೌಲಭ್ಯ ಸಹ ಇದೆ. ಈ ಫೋನ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ರಿಯಲ್‌ಮಿ C65 5G ಮೊಬೈಲ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಚಾರ್ಜಿಂಗ್‌ ಸಪೋರ್ಟ್‌ ಹೊಂದಿದೆ. ಇದರ ಜೊತೆಗೆ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೌಲಭ್ಯದ ಆಯ್ಕೆ ಇದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯದಲ್ಲಿ ಡ್ಯುಯಲ್ ಸಿಮ್, 5G, ವೈಫೈ 5 802.11 a/b/g/n/ac, ಬ್ಲೂಟೂತ್ 5.3 ಆಯ್ಕೆಗಳ ಆಯ್ಕೆಗಳನ್ನು ಕಾಣಬಹುದಾಗಿದೆ.

Best Mobiles in India

English summary
realme C65 5G received attractive price drop in flipkart india. know more about offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+