Home
ಸುದ್ದಿಜಾಲ

Realme: ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್! 6.67″ 120Hz ಡಿಸ್‌ಪ್ಲೆ...

ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ರಿಯಲ್‌ಮಿ (Realme) ಫೋನ್‌ಗಳು ತಮ್ಮದೇ ಆದ ವಿಶೇಷ ಫೀಚರ್ಸ್‌ ಆಯ್ಕೆ ಮೂಲಕ ಬಳಕೆದಾರರಿಗೆ ಭಿನ್ನ ಅನುಭವ ನೀಡುತ್ತವೆ. ಅಂತೆಯೇ ರಿಯಲ್‌ಮಿ ಶೀಘ್ರದಲ್ಲೇ ತನ್ನ ಪ್ರಸಿದ್ಧ ಪ್ರವೇಶ ಮಟ್ಟದ ಸಿ ಸರಣಿ C65 5G (Realme C65 5G Smartphone ) ಅನ್ನು ಭಾರತದಲ್ಲಿ ಕೆಲವೇ ದಿನಗಳಲ್ಲಿ ಲಾಂಚ್‌ ಮಾಡಲಿದೆ.

ಹೌದು, ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ನ ಕೆಲವು ಫೀಚರ್ಸ್‌ ಈಗಾಗಲೇ ಸ್ಮಾರ್ಟ್‌ಫೋನ್‌ ವಲಯದಲ್ಲಿ ಭಾರೀ ಸದ್ದು ಮಾಡುತ್ತಿವೆ. ಅದರಂತೆ ಈ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ದೊಡ್ಡ ವೃತ್ತಾಕಾರದ ಕ್ಯಾಮೆರಾ ಮಾಡ್ಯೂಲ್ ವಿನ್ಯಾಸವನ್ನು ಹಾಗೂ ಕರ್ವ್ ಅಂಚುಗಳೊಂದಿಗೆ ಬರಲಿದೆ ಎಂದು ತಿಳಿದುಬಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಆಯ್ಕೆ ಪಡೆದಿರಲಿದೆ?, ಯಾವಾಗ ಲಾಂಚ್‌ ಆಗಲಿದೆ ಎಂಬಿತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್! 6.67″ 120Hz ಡಿಸ್‌ಪ್ಲೆ...

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌: ಈ ಸ್ಮಾರ್ಟ್‌ಫೋನ್‌ನ ನಿರೀಕ್ಷಿತ ಫೀಚರ್ಸ್‌ ಕಡೆ ಕಣ್ಣಾಯಿಸುವುದಾದರೆ 6.67 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್ ಜೊತೆಗೆ 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿರಲಿದೆ. ಇದರ ಜೊತೆಗೆ ವೇರಿಯಬಲ್ ರಿಫ್ರೆಶ್ ರೇಟ್ ಆಯ್ಕೆ (120/90/60/50Hz) ಅನ್ನು ಕಾಣಬಹುದಾಗಿದ್ದು, 625 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದಿರಲಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 6nm ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 4GB / 6GB RAM (6GB ವರೆಗೆ ವರ್ಚುವಲ್ RAM ವಿಸ್ತರಣೆ) 64GB/128GB ಇಂಟರ್‌ ಸ್ಟೋರೇಜ್‌ ಆಯ್ಕೆಯೊಂದಿಗೆ ಲಭ್ಯ ಇರಲಿದ್ದು, ಮೈಕ್ರೊ ಎಸ್‌ಡಿ ಕಾರ್ಡ್‌ ಜೊತೆಗೆ 1TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್‌ ಆಯ್ಕೆ ಪಡೆದಿರಲಿದೆ ಎಂದು ತಿಳಿದುಬಂದಿದೆ. ಅಲ್ಲದೆ ಆಂಡ್ರಾಯ್ಡ್ 14 ಓಎಸ್‌ ಅನ್ನು ಈ ಫೋನ್‌ ರನ್‌ ಮಾಡಲಿದೆ.

ಈ ಫೋನ್‌ ಕ್ಯಾಮೆರಾ ವಿಚಾರಕ್ಕೆ ಬಂದರೆ ಇದು 50 ಮೆಗಾಪಿಕ್ಸೆಲ್ ರಿಯರ್‌ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆನ್ಸರ್‌ ಆಯ್ಕೆ ಪಡೆದಿರಲಿದ್ದು, ಎಲ್‌ಇಡಿ ಫ್ಲಾಶ್ ಆಯ್ಕೆ ಪಡೆಯಲಿದೆ ಎಂದು ತಿಳಿದುಬಂದಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ. ಇದರ ಜೊತೆಗೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದಿಲಿರಲಿದೆ ಎಂದು ತಿಳಿದುಬಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 15W ಚಾರ್ಜಿಂಗ್ ಬೆಂಬಲ ಪಡೆದಿರಲಿದ್ದು, IP54 ರೇಟಿಂಗ್, 5G NA/NSA, ಡ್ಯುಯಲ್ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್ + ಗ್ಲೋನಾಸ್‌, ಯುಎಸ್‌ಬಿ ಟೈಪ್-ಸಿ ಕನೆಕ್ಟಿವಿಟಿ ಬೆಂಬಲ ಪಡೆದಿದೆ. ಇದರ ಜೊತೆಗೆ ರಿಯಲ್‌ಮಿ ಈ ಫೋನ್‌ ಅನ್ನು ಭಾರತದಲ್ಲಿ 10,000ರೂ.ಗಳಲ್ಲಿ ಅನಾವರಣ ಮಾಡಲಿದೆ ಎಂದು ತಿಳಿದುಬಂದಿದೆ.

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್! 6.67″ 120Hz ಡಿಸ್‌ಪ್ಲೆ...

ರಿಯಲ್‌ಮಿ ನಾರ್ಜೋ 70x 5G ಯ ಬಿಡುಗಡೆ ಸನ್ನಿಹಿತ: ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರವೇ ಅನಾವರಣ ಆಗಲಿದೆ ಎಂದು ತಿಳಿದುಬಂದಿದೆ. ಈ ಫೋನ್‌ ಅನ್ನು ಏಪ್ರಿಲ್ 24 ರಂದು 12:00pm ಗೆ ಅನಾವರಣ ಮಾಡಲಾಗುತ್ತಿದ್ದು, ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆಯಾದ ಸ್ಮಾರ್ಟ್‌ಫೋನ್ ರಿಯಲ್‌ಮಿ ನಾರ್ಜೋ 60x ಅನ್ನು ಯಶಸ್ವಿಗೊಳಿಸುವ ಗುರಿಯನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್ 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, ಇದರ ಬೆಲೆ 12,000ರೂ.ಗಳಾಗಿರಬಹುದು ಎಂದು ಊಹಿಸಲಾಗಿದೆ.

ಇನ್ನು ಅಮೆಜಾನ್‌ನಲ್ಲಿ ಮೀಸಲಾದ ಮೈಕ್ರೋಸೈಟ್ ಮೂಲಕ ಈ ಫೋನ್‌ನ ಬಿಡುಗಡೆಯನ್ನು ಕೀಟಲೆ ಮಾಡಲಾಗಿದೆ. 45W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಈ ಫೋನ್‌ ಪಡೆದಿರಲಿದೆ ಎಂದು ಈ ಮೂಲಕ ತಿಳಿಸಲಾಗಿದೆ.

Best Mobiles in India

English summary
Realme C65 is making a lot of noise in the smartphone sector to receive some of the features of the 5G smartphone. Accordingly, this Realme C65 5G smartphone is tipped to come with a large circular camera module design and curved edges.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+