Home
ಸುದ್ದಿಜಾಲ

ಬಜೆಟ್‌ ಬೆಲೆಯ ಈ ನೂತನ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಇ ಕಾಮರ್ಸ್‌ ದೊಡ್ಡಣ್ಣ ಎಂದು ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಖರೀದಿದಾರರನ್ನು ಆಕರ್ಷಿಸಲು ಏನಾದರೊಂದು ಸೇಲ್‌ ಆಯೋಜಿಸುತ್ತ ಮುನ್ನಡೆದಿದೆ. ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಸೂಪರ್ ವ್ಯಾಲ್ಯೂ ಡೇಸ್‌ ಮಾರಾಟ ಲೈವ್‌ ಇದೆ. ಈ ಸೇಲ್‌ನಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ರಿಯಲ್‌ಮಿ ಬಜೆಟ್‌ ದರದ 5G ಸ್ಮಾರ್ಟ್‌ಫೋನ್‌ ರಿಯಲ್‌ಮಿ C67 5G ಮೊಬೈಲ್‌ ಗಮನಾರ್ಹ ರಿಯಾಯಿತಿ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ C67 5G ಮೊಬೈಲ್‌ ಶೇ. 23% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 12,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಇತರೆ ಕೆಲವು ಡಿಸ್ಕೌಂಟ್‌ ಕೊಡುಗೆಗಳು ಕೂಡಾ ಖರೀದಿದಾರರಿಗೆ ಲಭ್ಯ ಆಗಲಿವೆ.

ಬಜೆಟ್‌ ಬೆಲೆಯ ಈ ನೂತನ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಅಂದಹಾಗೆ ಈ ಫ್ಲ್ಯಾಗ್‌ಶಿಪ್‌ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಸೌಲಭ್ಯ ಪಡೆದಿದೆ. ಹಾಗೆಯೇ 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಇನ್ನು ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ C67 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ C67 5G - ಫೀಚರ್ಸ್‌

ರಿಯಲ್‌ಮಿ C67 5G ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ ಹೊಂದಿದೆ. ಇದು 680 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್‌ನಲ್ಲಿ ಮಿನಿ ಕ್ಯಾಪ್ಸುಲ್ 2.0 ಫೀಚರ್ಸ್‌ ಅನ್ನು ಸಹ ಅಳವಡಿಸಲಾಗಿದೆ.

ಬಜೆಟ್‌ ಬೆಲೆಯ ಈ ನೂತನ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ರಿಯಲ್‌ಮಿಯ ಈ ಫೋನ್‌ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಕಾರ್ಯ ದಕ್ಷತೆಯನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇದಲ್ಲದೆ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 6GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್‌ ಅನ್ನು ಹೆಚ್ಚಿಸಬಹುದು.

ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇನ್ನು ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್‌ ಅನ್ನು ಒಳಗೊಂಡಿದೆ. ಹಾಗೆಯೇ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದಿದೆ.

ರಿಯಲ್‌ಮಿ C67 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇದಲ್ಲದೆ ವೇಗವಾಗಿ ಚಾರ್ಜಿಂಗ್ ಮಾಡುವುದರಿಂದ ಕೇವಲ 29 ನಿಮಿಷಗಳಲ್ಲಿ ಶೂನ್ಯದಿಂದ 50 ಪ್ರತಿಶತದವರೆಗೆ ಫೋನ್ ಅನ್ನು ಚಾರ್ಜ್ ಮಾಡಬಹುದು.

ರಿಯಲ್‌ಮಿ C67 5G ಮೊಬೈಲ್‌ ಎರಡು ವೇರಿಯಂಟ್ ಮಾಡೆಲ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB ವೇರಿಯಂಟ್‌ ಹಾಗೂ 6GB + 128GB ವೇರಿಯಂಟ್‌ ಆಗಿವೆ. ಇನ್ನು ಈ ಫೋನ್‌ ಡಾರ್ಕ್ ಪರ್ಪಲ್ ಮತ್ತು ಸನ್ನಿ ಓಯಸಿಸ್ ಬಣ್ಣ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
realme C67 5G receive awesome price drop in india in Flipkart website India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+