ಇಂದು ರಿಯಲ್‌ಮಿ C67 5G ಫೋನ್ ಸೇಲ್ ಆರಂಭ!..ಬಜೆಟ್ ಬೆಲೆಗೆ ಲಭ್ಯ!
ಜನಪ್ರಿಯ ರಿಯಲ್‌ಮಿ ಮೊಬೈಲ್ ಸಂಸ್ಥೆಯು ಭಿನ್ನ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ರಿಯಲ್‌ಮಿ ಸಂಸ್ಥೆಯ ನೂತನವಾಗಿ ಲಾಂಚ್ ಮಾಡಿರುವ ರಿಯಲ್‌ಮಿ C67 5G ಫೋನ್ ಇಂದು (ಡಿಸೆಂಬರ್ 20 ರಂದು) ಮಧ್ಯಾಹ್ನ 12 ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಶುರು ಮಾಡಲಿದೆ.
ಹೌದು, ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಸೇಲ್ ಆರಂಭಿಸಲಿದ್ದು, ಗ್ರಾಹಕರಿಗೆ ಆಕರ್ಷಕ ರಿಯಾಯಿತಿ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ 4 GB RAM + 128 GB ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.

ರಿಯಲ್‌ಮಿ C67 5G ಫೋನಿನ 4 GB RAM + 128 GB ವೇರಿಯಂಟ್ 13,999ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಅದೇ ರೀತಿ 6 GB RAM + 128 GB ವೇರಿಯಂಟ್ 14,999ರೂ. ಬೆಲೆಯನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ. ಹಾಗಾದರೆ ರಿಯಲ್‌ಮಿ C67 5G ಮೊಬೈಲ್‌ನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರಿಯಲ್‌ಮಿ C67 5G ಫೀಚರ್ಸ್
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದರ ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದು 680 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ನಲ್ಲಿ ಮಿನಿ ಕ್ಯಾಪ್ಸುಲ್ 2.0 ಫೀಚರ್ಸ್ ಅನ್ನು ಸಹ ಅಳವಡಿಸಲಾಗಿದೆ.

ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪಡೆದಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 6GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್ ಅನ್ನು ವೃದ್ಧಿಸಬಹುದು.
ಈ ಮೊಬೈಲ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ.

ಹಾಗೆಯೇ ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದ್ದು, ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಇದಲ್ಲದೆ ಫಾಸ್ಟ್ ಚಾರ್ಜಿಂಗ್ ಇರುವುದರಿಂದ, ಕೇವಲ 29 ನಿಮಿಷಗಳಲ್ಲಿ ಜಿರೋದಿಂದ ಶೇ. 50 ರ ವರೆಗೂ ಮೊಬೈಲ್ ಅನ್ನು ಚಾರ್ಜ್ ಮಾಡಲು ಅವಕಾಶ ಇದೆ.
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB + 128GB ವೇರಿಯಂಟ್ ಆಯ್ಕೆಗೆ 13,999ರೂ. ದರವನ್ನು ಹೊಂದಿದೆ. ಹಾಗೆಯೇ 6GB + 128GB ವೇರಿಯಂಟ್ ಆಯ್ಕೆಯು 14,999ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ ಡಾರ್ಕ್ ಪರ್ಪಲ್ ಮತ್ತು ಸನ್ನಿ ಓಯಸಿಸ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಫ್ಲಿಪ್‌ಕಾರ್ಟ್‌ನಲ್ಲಿ ಗ್ರಾಹಕರಿಗೆ ಕೆಲವು ಆಫರ್‌ಗಳು ಲಭ್ಯ ಇವೆ.


Click it and Unblock the Notifications








