ನಾಳೆ ಈ ಅಗ್ಗದ ಫೋನ್ ಮತ್ತೆ ಖರೀದಿಗೆ ಲಭ್ಯ!..ಬಿಗ್ ಬ್ಯಾಟರಿ ಬ್ಯಾಕ್‌ಅಪ್!
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಭಿನ್ನ ದರದಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ರಿಯಲ್‌ಮಿಯು ನೂತನವಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ C67 5G ಫೋನ್ ನಾಳೆ (ಡಿಸೆಂಬರ್ 20 ರಂದು) ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಸೆಕೆಂಡ್ ಸೇಲ್ ಪ್ರಾರಂಭಿಸಲಿದೆ.
ಹೌದು, ರಿಯಲ್‌ಮಿ C67 5G ಫೋನ್ ನಾಳೆ ಸೆಕೆಂಡ್ ಸೇಲ್ ಅನ್ನು ಫ್ಲಿಪ್‌ಕಾರ್ಟ್ ಮೂಲಕ ಸೇಲ್ ಶುರು ಮಾಡಲಿದ್ದು, ಗ್ರಾಹಕರಿಗೆ ಆಫರ್‌ಗಳು ದೊರೆಯುತ್ತವೆ. ಈ ಫೋನ್ 4 GB RAM + 128 GB ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಅಂದಹಾಗೆ ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 13,999ರೂ. ಆಗಿದೆ. ಹಾಗೆಯೇ 6 GB RAM + 128 GB ಸ್ಟೋರೇಜ್ ವೇರಿಯಂಟ್ ದರವು 14,999ರೂ. ಹೊಂದಿದೆ. ಇನ್ನು ಈ ಮೊಬೈಲ್ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಒಳಗೊಂಡಿದೆ. ಹಾಗಾದರೆ ರಿಯಲ್‌ಮಿ C67 5G ಮೊಬೈಲ್‌ನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ C67 5G ಫೀಚರ್ಸ್ ಮಾಹಿತಿ
ರಿಯಲ್‌ಮಿ C67 5G ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದರ ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದು 680 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ನಲ್ಲಿ ಮಿನಿ ಕ್ಯಾಪ್ಸುಲ್ 2.0 ಫೀಚರ್ಸ್ ಅನ್ನು ಸಹ ಅಳವಡಿಸಲಾಗಿದೆ.
ರಿಯಲ್‌ಮಿಯ ಈ ಮೊಬೈಲ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ದಕ್ಷತೆಯನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 6GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್ ಅನ್ನು ವೃದ್ಧಿಸಬಹುದು.
ಈ ಮೊಬೈಲ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ C67 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದ್ದು, ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಹೊಂದಿದೆ. ಇದಲ್ಲದೆ ವೇಗವಾಗಿ ಚಾರ್ಜಿಂಗ್ ಮಾಡುವುದರಿಂದ ಕೇವಲ 29 ನಿಮಿಷಗಳಲ್ಲಿ ಶೂನ್ಯದಿಂದ 50 ಪ್ರತಿಶತದವರೆಗೆ ಫೋನ್ ಅನ್ನು ಚಾರ್ಜ್ ಮಾಡಲು ಅವಕಾಶ ಇದೆ.
ರಿಯಲ್‌ಮಿ C67 5G ಫೋನ್ ಬೇಸ್ ಮಾಡೆಲ್ 4GB + 128GB ವೇರಿಯಂಟ್ ಆಯ್ಕೆಗೆ 13,999ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಇನ್ನು ಇದರ 6GB + 128GB ವೇರಿಯಂಟ್ ಆಯ್ಕೆಯು 14,999ರೂ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ. ಇದನ್ನು ಡಾರ್ಕ್ ಪರ್ಪಲ್ ಮತ್ತು ಸನ್ನಿ ಓಯಸಿಸ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದು.


Click it and Unblock the Notifications








