ಫೋನ್ ಖರೀದಿಸುವ ಮುನ್ನ ಸ್ವಲ್ಪ ದಿನ ಕಾಯಿರಿ!..ಬರ್ತಾ ಇದೆ ಚಾಂಪಿಯನ್ ಸ್ಮಾರ್ಟ್‌ಫೋನ್!
ಹೊಸತನದ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ರಿಯಲ್‌ಮಿ ಇದೀಗ ಹೊಸ ರಿಯಲ್‌ಮಿ C67 5G ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಪ್ರಕಟಣೆ ಮಾಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಡಿಸೆಂಬರ್ 14 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.
ಹೌದು, ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ ರಿಯಲ್‌ಮಿ ಸಿ-ಸರಣಿ ಶ್ರೇಣಿಯಲ್ಲಿ ಬರುವ ಮೊದಲ 5G ಫೋನ್ ಆಗಿರಲಿದೆ. ಇನ್ನು ಸ್ಮಾರ್ಟ್‌ಫೋನ್ ಸನ್ನಿ ಓಯಸಿಸ್ ವಿನ್ಯಾಸ ಮತ್ತು 33W ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದೊಂದಿಗೆ ಬರುತ್ತದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C67 5G ಡಿಸ್‌ಪ್ಲೇ ರಚನೆ ವಿನ್ಯಾಸ ನಿರೀಕ್ಷೆ?
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಈ ಡಿಸ್‌ಪ್ಲೇ 388 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದ್ದು, 240 Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರುವ ಸಾಧ್ಯತೆಯಿದೆ.
ರಿಯಲ್‌ಮಿ C67 5G ಪ್ರೊಸೆಸರ್ ಯಾವುದು?
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020 ಚಿಪ್‌ಸೆಟ್‌ನಲ್ಲಿ ಬರಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸಂಗ್ರಹಣೆಯೊಂದಿಗೆ ಬರಲಿದೆ ಎಂದು ದೃಢಪಡಿಸಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ ಎನ್ನಲಾಗಿದೆ.

ರಿಯಲ್‌ಮಿ C67 5G ಕ್ಯಾಮೆರಾ ರಚನೆ
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, LED ಫ್ಲ್ಯಾಷ್‌ನಿಂದ ಬೆಂಬಲಿತವಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ರಿಯಲ್‌ಮಿ C67 5G ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ರಿಯಲ್‌ಮಿ C67 5G ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C67 5G ಸ್ಮಾರ್ಟ್‌ಫೋನ್ ಭಾರತದಲ್ಲಿ 12,000ರೂ ಗಳಿಂದ 15,000ರೂ ವರೆಗೆ ಇರುತ್ತದೆ ಎಂದು ರಿಯಲ್‌ಮಿ ಸಂಸ್ಥೆ ಹೇಳಿದೆ. ಅದರಂತೆ ಇದು ದೇಶದಲ್ಲಿ ಕೈ ಗೆಟಕುವ ಬೆಲೆಯಲ್ಲಿ ಲಭ್ಯವಾಗುವ 5G ಹ್ಯಾಂಡ್‌ಸೆಟ್‌ಗಳಲ್ಲಿ ಒಂದಾಗಿರಲಿದೆ. ಈ ಫೋನ್ ಹಸಿರು ಅಥವಾ ನೇರಳೆ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.
ಇನ್ನು ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾಂಜಾ ಸೇಲ್‌ನಲ್ಲಿ ರಿಯಲ್‌ಮಿ C55 ಫೋನ್ ಗ್ರಾಹಕರು ಹುಬ್ಬೇರಿಸುವಂತಹ ರಿಯಾಯಿತಿ ಪಡೆದುಕೊಂಡಿದೆ. ಪ್ರಸ್ತತ ಈ ಸೇಲ್ ನಲ್ಲಿ ರಿಯಲ್‌ಮಿ C55 (64GB) ಫೋನ್ ಮೇಲೆ ಶೇ. 23% ರಷ್ಟು ಕೊಡುಗೆ ಲಭ್ಯ ಇದ್ದು, ಖರೀದಿದಾರರು 9,999ರೂ. ಗಳಿಗೆ ಕೊಳ್ಳಬಹುದಾಗಿದೆ. ಹಾಗೆಯೇ ಬ್ಯಾಂಕ್ ಕೊಡುಗೆ ಹಾಗೂ ಇತರೆ ಕೊಡುಗೆ ಪಡೆದರೇ ಈ ಫೋನ್ ಅನ್ನು 8,999ರೂ. ಗಳಿಗೂ ಖರೀದಿಸಬಹುದಾಗಿದೆ.


Click it and Unblock the Notifications








