Home
ಸುದ್ದಿಜಾಲ

Realme: ಹೇಗಿದೆ ಗೊತ್ತಾ ರಿಯಲ್‌ಮಿ ನೋಟ್‌ ಸರಣಿಯ ಮೊದಲ ಸ್ಮಾರ್ಟ್‌ಫೋನ್‌! ಅಬ್ಬಬ್ಬಾ ಭರ್ಜರಿ ಜಾಕ್‌ಪಾಟ್‌!

ರಿಯಲ್‌ಮಿ ಬ್ರ್ಯಾಂಡ್‌ ಮೊಬೈಲ್‌ ಮಾರುಕಟ್ಟೆಯಲ್ಲಿ ಹೊಸತನಕ್ಕೆ ಹೆಸರುವಾಸಿಯಾಗಿದೆ. ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿರುವ ರಿಯಲ್‌ಮಿ ಇದೀಗ ಹೊಸ Realme Note 50 ಸ್ಮಾರ್ಟ್‌ಪೋನ್‌ ಬಿಡುಗಡೆ ಮಾಡಿದೆ. ಈ ಮೂಲಕ ನೋಟ್‌ ಸರಣಿಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸೂಚನೆ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ.

ಹೌದು, Realme Note 50 ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಬಜೆಟ್ ಬೆಲೆಯಲ್ಲಿ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಲುಕ್‌ ಅನ್ನು ಪಡೆದುಕೊಂಡಿದೆ. ಈ ಫೋನ್ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹೇಗಿದೆ ಗೊತ್ತಾ ರಿಯಲ್‌ಮಿ ನೋಟ್‌ ಸರಣಿಯ ಮೊದಲ ಫೋನ್‌! ಭರ್ಜರಿ ಜಾಕ್‌ಪಾಟ್‌!

Realme Note 50 ಡಿಸ್‌ಪ್ಲೇ ರಚನೆ ಹೇಗಿದೆ?
Realme Note 50 ಸ್ಮಾರ್ಟ್‌ಫೋನ್‌ 6.74-ಇಂಚಿನ IPS HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 560 nits ವರೆಗೆ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ.

Realme Note 50 ಪ್ರೊಸೆಸರ್‌ ಯಾವುದು?
Realme Note 50 ಸ್ಮಾರ್ಟ್‌ಫೋನ್‌ UNISOC T612 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಮಾಲಿ G57 MP1 GPU ಸಪೋರ್ಟ್‌ ಪಡೆದಿದ್ದು,ಆಂಡ್ರಾಯ್ಡ್ 13 ಆಧಾರಿತ realme UI T ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಹೊಂದಿದ್ದು, ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸಬಹುದಾಗಿದೆ.

ಹೇಗಿದೆ ಗೊತ್ತಾ ರಿಯಲ್‌ಮಿ ನೋಟ್‌ ಸರಣಿಯ ಮೊದಲ ಫೋನ್‌! ಭರ್ಜರಿ ಜಾಕ್‌ಪಾಟ್‌!

Realme Note 50 ಕ್ಯಾಮೆರಾ ರಚನೆ ಮತ್ತು ವಿನ್ಯಾಸ
Realme Note 50 ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ LED ಫ್ಲ್ಯಾಷ್ ಮತ್ತು B&W ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾವನ್ನು ನೀಡಲಾಗಿದೆ.

Realme Note 50 ಬ್ಯಾಟರಿ ಮತ್ತು ಇತರೆ
Realme Note 50 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11 ac, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ನೀಡಲಾಗಿದೆ.

ಹೇಗಿದೆ ಗೊತ್ತಾ ರಿಯಲ್‌ಮಿ ನೋಟ್‌ ಸರಣಿಯ ಮೊದಲ ಫೋನ್‌! ಭರ್ಜರಿ ಜಾಕ್‌ಪಾಟ್‌!

Realme Note 50 ಬೆಲೆ ಮತ್ತು ಲಭ್ಯತೆ
Realme Note 50 ಸ್ಮಾರ್ಟ್‌ಫೋನ್‌ ಫಿಲಿಫೈನ್ಸ್‌ನಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ಇದರ ಬೆಲೆ 3,599 ಫಿಲಿಪೈನ್ ಪೆಸೊ ( ಅಂದಾಜು 5,325ರೂ)ಆಗಿದೆ. ಇದನ್ನು ನೀವು ಸ್ಕೈ ಬ್ಲೂ ಮತ್ತು ಮಿಡ್‌ನೈಟ್ ಬ್ಲಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತಕ್ಕೆ ಯಾವಾಗ ಎಂಟ್ರಿ ನೀಡಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್‌ ಜಾಗತಿಕವಾಗಿ ಇತರೆ ಮಾರುಕಟ್ಟೆಗಳಿಗೂ ಕೂಡ ವಿಸ್ತರಣೆಯಾಗುವ ನಿರೀಕ್ಷೆಯನ್ನು ಇಡಲಾಗಿದೆ.

Best Mobiles in India

English summary
Realme company’s first Note series phone Realme Note 50 launched: price, specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+