Home
ಸುದ್ದಿಜಾಲ

ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ಡಿಸ್ಕೌಂಟ್‌!..ಆಫರ್‌ ಎಲ್ಲಿ ಲಭ್ಯ?

ಹಬ್ಬಗಳು ಬಂದರೆ ಸಾಕು ಇ ಕಾಮರ್ಸ್ ತಾಣಗಳು ಭರ್ಜರಿ ಸೇಲ್‌ ಮೇಳಗಳನ್ನು ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತವೆ. ಅದೇ ರೀತಿ ಇತ್ತೀಚಿಗೆ ಮೊಬೈಲ್‌ ಸಂಸ್ಥೆಗಳು ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಹೆಚ್ಚಿನ ಆಫರ್‌ ಘೋಷಿಸುತ್ತಿವೆ. ಇದೀಗ ರಿಯಲ್‌ಮಿ ಕಂಪನಿಯು ರಿಯಲ್‌ಮಿ ಫೆಸ್ಟಿವಲ್‌ ಡೇಸ್‌ (Realme Festive Days) ಸೇಲ್‌ ಅನ್ನು ತಿಳಿಸಿದ್ದು, ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪನಿಯು ರಿಯಲ್‌ಮಿ.ಕಾಮ್‌, ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ ತಾಣಗಳಲ್ಲಿ ರಿಯಲ್‌ಮಿ ಫೆಸ್ಟಿವಲ್‌ ಡೇಸ್‌ ಅನ್ನು ಪ್ರಕಟಿಸಿದೆ. ಇನ್ನು ಈ ಮಾರಾಟ ಮೇಳವು ಇದೇ ಸೆಪ್ಟೆಂಬರ್ 23 ರಿಂದ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು ಮತ್ತು AIOT ಉತ್ಪನ್ನಗಳು ಸೇರಿದಂತೆ ತನ್ನ ವಿವಿಧ ಉತ್ಪನ್ನಗಳ ಮೇಲೆ ಭರ್ಜರಿ ರಿಯಾಯಿತಿಗಳನ್ನು ನೀಡುತ್ತದೆ.

ರಿಯಲ್‌ಮಿ

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ GT 2 ಪ್ರೊ ಫೋನ್‌ 15,000ರೂ. ಗಳ ವರೆಗೂ ಡಿಸ್ಕೌಂಟ್‌ ಸಿಗಲಿದೆ. ಅದೇ ರೀತಿ ರಿಯಲ್‌ಮಿ ನಾರ್ಜೋ 50 ಫೋನ್‌ 11,999ರೂ.ಗಳ ಆರಂಭಿಕ ಬೆಲೆಯೊಂದಿಗೆ ಲಭ್ಯವಾಗಲಿದೆ. ಹಾಗೆಯೇ ರಿಯಲ್‌ಮಿ 5G GT ನಿಯೋ 3T ಸ್ಮಾರ್ಟ್‌ಫೋನ್‌ ಸಹ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯವಾಗಲಿವೆ. ಹಾಗಾದರೆ ರಿಯಲ್‌ಮಿ 5G GT ನಿಯೋ 3T ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡುತ್ತದೆ. ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಪಡೆದಿದೆ.

ಪ್ರೊಸೆಸರ್‌ ಪವರ್‌ ಎಷ್ಟು?

ಪ್ರೊಸೆಸರ್‌ ಪವರ್‌ ಎಷ್ಟು?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಅನ್ನು ರಿಯಲ್‌ಮಿ UI 3.0 ಜೊತೆಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಫೋನ್‌ ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದ್ದು, ಹೆಚ್ಚುವರಿ 5GB RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಎಂಟು ಕೂಲಿಂಗ್ ಲೇಯರ್‌ಗಳನ್ನು ಒಳಗೊಂಡಿರುವ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ಸಿಸ್ಟಮ್ ಪ್ಲಸ್ ಅನ್ನು ಹೊಂದಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆನ್ಸಾರ್

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ 119 ಡಿಗ್ರಿ ಫೀಲ್ಡ್-ಆಫ್-ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 5G, 4G LTE, ಬ್ಲೂಟೂತ್ v5.2, NFC, ಮತ್ತು USB ಟೈಪ್ C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಆನ್‌ಬೋರ್ಡ್‌ನಲ್ಲಿ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೊ ಸೆನ್ಸಾರ್‌ ಮತ್ತು ಅಂಡರ್-ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.

ಲಭ್ಯತೆ ಮತ್ತು ಆಫರ್

ಲಭ್ಯತೆ ಮತ್ತು ಆಫರ್

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 23 ರಂದು ಅಧಿಕೃತ ರಿಯಲ್‌ಮಿ.ಕಾಮ್‌, ಫ್ಲಿಪ್‌ಕಾರ್ಟ್‌ ಮತ್ತು ಪ್ರಮುಖ ಸ್ಟೋರ್‌ಗಳಲ್ಲಿ ಮಾರಾಟ ಆರಂಭಿಸಲಿದೆ. ಇನ್ನು ಫಸ್ಟ್‌ ಸೇಲ್‌ ಸಮಯದಲ್ಲಿ ಈ ಸ್ಮಾರ್ಟ್‌ಫೋನಿನ ಮೇಲೆ 7,000ರೂ. ರಿಯಾಯಿತಿಯನ್ನು ನೀಡಲಾಗ್ತಿದೆ. ಇನ್ನು ಈ ಫೋನ್‌ ಡ್ಯಾಶ್ ಹಳದಿ, ಡ್ರಿಫ್ಟಿಂಗ್ ವೈಟ್ ಮತ್ತು ಶೇಡ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme Festive Days Sale 2022: Best Offers On Realme Smartphones. On flipkart platform.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+